ಬೆಂಗಳೂರು, ಆಗಸ್ಟ್ 07: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮತ್ತು ಖಾತೆ ಹಂಚಿಕೆ ಕುರಿತ ಚರ್ಚೆಗಳ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಯಾವುದೇ ಸಚಿವರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಸೇರಿದ್ದು, ಅವರು ಹೈಕಮಾಂಡ್ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಸುಮಾರು 140 ಶಾಸಕರಿದ್ದು, 30-33 ಸಚಿವ ಸ್ಥಾನಗಳಿವೆ. ಎಲ್ಲರಿಗೂ ತೃಪ್ತಿಪಡಿಸುವುದು ಕಷ್ಟದ ಕೆಲಸ. ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯ ನೀಡುವ ಸವಾಲುಗಳಿದ್ದರೂ, ಎಲ್ಲರೂ ಒಟ್ಟಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಒಂದು ವೇಳೆ ಹೈಕಮಾಂಡ್ ಸೂಚಿಸಿದರೆ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಕೆಲಸ ಮಾಡಲು ತಾನು ಬದ್ಧ ಎಂದು ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಈ ತೀರ್ಮಾನವು ತಮಗೆ ಮಾತ್ರವಲ್ಲದೆ ಎಲ್ಲರಿಗೂ ಅನ್ವಯಿಸುತ್ತದೆ ಎಂದೂ ಅವರು ಹೇಳಿದ್ದು, ಹೈಕಮಾಂಡ್‌ನ ಯಾವುದೇ ನಿರ್ಧಾರಕ್ಕೆ ತಾನು ಸಂಪೂರ್ಣವಾಗಿ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.