ಟಾಲಿವುಡ್ ಮ್ಯಾನ್ ಆಫ್ ಮಾಸಸ್, ನಟ ಜೂನಿಯರ್ ಎನ್‌ಟಿಆರ್ (Jr NTR) ಅವರಿಗೆ ಬುಧವಾರ (ಆಗಸ್ಟ್ 12) ಹೈದರಾಬಾದ್‌ನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆ (Shoulder Surgery) ನಡೆಯಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೈದ್ಯಕೀಯ ತಪಾಸಣೆಯ ನಂತರ ಈ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಲಾಗಿದೆ ಎಂದು ಅವರ ತಂಡ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ವೈದ್ಯರ ತಂಡದಿಂದ ಚಿಕಿತ್ಸೆ ಮತ್ತು ನಿಗಾ
ಎನ್‌ಟಿಆರ್ ಅವರ ಭುಜದ ಗಾಯದ ಕುರಿತು ಕೂಲಂಕುಷವಾಗಿ ಪರಿಶೀಲಿಸಿದ ವೈದ್ಯರ ಸಲಹೆಯಂತೆ ಈ ಚಿಕಿತ್ಸೆ ನಡೆಯುತ್ತಿದೆ. ಶಸ್ತ್ರಚಿಕಿತ್ಸೆಯ ನಂತರ ವೈದ್ಯರ ವಿಶೇಷ ತಂಡವು ಅವರ ಚೇತರಿಕೆಯ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದು, ಕಾಲಕಾಲಕ್ಕೆ ಆರೋಗ್ಯದ ಕುರಿತು ಅಪ್‌ಡೇಟ್ ನೀಡಲಿದೆ. ಈ ಬಗ್ಗೆ ಎನ್‌ಟಿಆರ್ ತಂಡ ಅಧಿಕೃತ ಹೇಳಿಕೆ ನೀಡಿದೆ.
#NTR to undergo right shoulder surgery tomorrow at KIMS Hospital, Hyderabad. A team of medical experts to perform this delicate surgery.
Wishing a speedy recovery @tarak9999 #Dragon #JrNTR pic.twitter.com/1XqCdL36hU
— Sandeep Athreya (@SandeepAatreya) August 11, 2026
‘ಎನ್‌ಟಿಆರ್ ಅವರು ಆಗಸ್ಟ್ 12ರಂದು ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರ ಈ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಲಾಗಿದೆ. ಎನ್‌ಟಿಆರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ತಂಡ ಶ್ರಮಿಸುತ್ತಿದೆ. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯದ ಸ್ಥಿತಿಗತಿಯನ್ನು ನಿಮಗೆ ತಿಳಿಸುತ್ತೇವೆ. ನಿಮ್ಮ ಬೆಂಬಲ ಮತ್ತು ಪ್ರೀತಿಗೆ ಧನ್ಯವಾದಗಳು’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಖಾಸಗಿತನಕ್ಕೆ ಗೌರವ ನೀಡಲು ಮನವಿ:
ಎನ್‌ಟಿಆರ್ ಅವರ ತಂಡವು ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ. ಈ ನಡುವೆ, ಅವರ ತಂಡದವರು ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸಿದ್ದು, ನಟ ಚೇತರಿಸಿಕೊಳ್ಳುವ ಸಮಯದಲ್ಲಿ ಅವರ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿದೆ.
ಇದನ್ನೂ ಓದಿ: ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್
ಚಿತ್ರೀಕರಣಕ್ಕೆ ಸಣ್ಣ ವಿರಾಮ:
ಪ್ರಸ್ತುತ ಜೂನಿಯರ್ ಎನ್‌ಟಿಆರ್ ಅವರು ಸಾಲು ಸಾಲು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ಹಾಗೂ 2024ರ ಬ್ಲಾಕ್‌ಬಸ್ಟರ್ ‘ದೇವರ: ಪಾರ್ಟ್ 1’ ಚಿತ್ರದ ಮುಂದುವರಿದ ಭಾಗವಾದ ‘ದೇವರ: ಪಾರ್ಟ್ 2’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಆದರೆ ಈಗ ಶಸ್ತ್ರಚಿಕಿತ್ಸೆಯ ಕಾರಣದಿಂದ ಚಿತ್ರೀಕರಣಕ್ಕೆ ಸಣ್ಣ ವಿರಾಮ ಬೀಳಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.