ಹೈದರಾಬಾದ್, ಆಗಸ್ಟ್ 8: ಹೈದರಾಬಾದ್‌ನ ಮಿಯಾಪುರದಲ್ಲಿರುವ ಜಿಎಸ್‌ಎಂ ಮಾಲ್ ಬಳಿ ಇಂದು ಸಂಜೆ ಬಲೂನ್‌ಗಳಿಗೆ ಗ್ಯಾಸ್ ತುಂಬಲು ಬಳಸುತ್ತಿದ್ದ ಸಣ್ಣ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು (Blast ) ನಾಲ್ಕಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದಾಗ ಸಿಲಿಂಡರ್ ದಿಢೀರನೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ ಜನರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಪ್ರಾಣಭಯದಿಂದ ಸುರಕ್ಷಿತ ಸ್ಥಳಗಳಿಗೆ ಓಡಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
