ಹೈದರಾಬಾದ್, ಆಗಸ್ಟ್ 9: ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ (NALSAR University of Law) 2026ರ ಸಾಲಿನ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳ ಗುಂಪೊಂದು, ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
2026ರ ಬ್ಯಾಚ್‌ನ ಹೊರಹೋಗುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಉಪಕುಲಪತಿಗಳು (VC), ರಿಜಿಸ್ಟ್ರಾರ್ ಮತ್ತು ಉಪನ್ಯಾಸಕರಿಗೆ ಜಂಟಿ ಪತ್ರ ಬರೆದಿದ್ದು, ಸಿಜೆಐ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
ವಿರೋಧಕ್ಕೆ ಕಾರಣ: ಇತ್ತೀಚಿನ ಜಂತರ್ ಮಂತರ್ ಪ್ರತಿಭಟನೆ ಮತ್ತು ಇತರ ನ್ಯಾಯಾಂಗ ವಿಚಾರಣೆಗಳ ಸಂದರ್ಭದಲ್ಲಿ ಸಿಜೆಐ ಸೂರ್ಯ ಕಾಂತ್ ಅವರು ನೀಡಿದರೆನ್ನಲಾದ ಕೆಲವು ಹೇಳಿಕೆಗಳು ಹಾಗೂ ವಿದ್ಯಾರ್ಥಿ ಪ್ರತಿಭಟನೆ ಬಗ್ಗೆ ವ್ಯಕ್ತಪಡಿಸಿದ ನಿಲುವುಗಳು ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: 90ರ ದಶಕದ ಕರಾಳ ಕಾಶ್ಮೀರಿ ಉಗ್ರ ಇತಿಹಾಸ ಮರುಕಳಿಸುತ್ತಿದೆಯೇ? ಪಂಡಿತರಿಗೆ ಶುರುವಾಗಿವೆ ಉಗ್ರ ಬೆದರಿಕೆಗಳು
‘ಅವರ ಕೈಯಿಂದ ಪದವಿ ಪಡೆಯಲು ಇಷ್ಟವಿಲ್ಲ’
ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಭಾವನಾತ್ಮಕವಾಗಿ ಅತ್ಯಂತ ಮಹತ್ವದಾಗಿರುವ ಘಟಿಕೋತ್ಸವದಲ್ಲಿ ಇಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯಿಂದ ಪದವಿ ಪ್ರಮಾಣಪತ್ರಗಳನ್ನು ಸ್ವೀಕರಿಸುವುದು ಸೂಕ್ತವಲ್ಲ ಎಂದು ಈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಶ್ವವಿದ್ಯಾಲಯದ ಪ್ರತಿಕ್ರಿಯೆ: ನಲ್ಸಾರ್ ವಿಶ್ವವಿದ್ಯಾಲಯದ ಸಮಾರಂಭಗಳಲ್ಲಿ ಸಿಜೆಐ ಅವರನ್ನು ಆಹ್ವಾನಿಸುವುದು ಈ ಹಿಂದಿನಿಂದಲೂ ನಡೆದುಬಂದ ಸಂಪ್ರದಾಯವಾಗಿದೆ. ಆದರೆ ವಿದ್ಯಾರ್ಥಿಗಳ ಈ ಆಕ್ಷೇಪಣಾ ಪತ್ರದ ಕುರಿತು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ಇದನ್ನೂ ಓದಿ: ಓಣಂ ಹಬ್ಬದ ಹಿನ್ನೆಲೆ ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ 90 ವಿಶೇಷ ಬಸ್‌ಗಳ ವ್ಯವಸ್ಥೆ
ಮುಂಬೈನಲ್ಲೂ ಮುಂದೂಡಿಕೆಯಾಗಿತ್ತು ಟಿಸ್ ಘಟಿಕೋತ್ಸವ ಕಾರ್ಯಕ್ರಮ
ಎರಡು ವಾರಗಳ ಹಿಂದೆ ಮುಂಬೈನಲ್ಲಿರುವ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಸಂಸ್ಥೆಯ 86ನೇ ಘಟಿಕೋತ್ಸವ ಕೂಡ ಮುಂದೂಡಿಕೆ ಆಗಿತ್ತು. ಆಗಸ್ಟ್ 2ರಂದು ನಡೆಯಬೇಕಿದ್ದ ಈ ಕಾರ್ಯಕ್ರಮಕ್ಕೆ ಸಿಜೆಐ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದರು. ಆದರೆ, ಭದ್ರತಾ ಕಳವಳ ವ್ಯಕ್ತಪಡಿಸಿ, ಶಿಕ್ಷಣ ಸಂಸ್ಥೆಯು ಘಟಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಿತ್ತು. ಕೆಲ ವರದಿಗಳ ಪ್ರಕಾರ, ಸಿಜೆಐ ಮುಖ್ಯ ಅತಿಥಿಗಳಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆಗಳ ವಿರೋಧ ಬಂದಿತ್ತು ಎನ್ನಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
