ಬೆಂಗಳೂರು, ಏಪ್ರಿಲ್ 20: ಡಿಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಸಮ್ಮುಖದಲ್ಲಿ ಈ ಕುರಿತು ಮುಕ್ತವಾಗಿ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿರುವ ಅವರು, ಕೇವಲ 30 ನಿಮಿಷಗಳಲ್ಲಿ ಎಲ್ಲ ಕರ್ಮಕಾಂಡಗಳನ್ನು ಬಿಚ್ಚಿಡುವುದಾಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
