ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಲಾಸ್ಟ್ ಡ್ರೈವ್ ಆದ ಲಾಂಗ್ ಡ್ರೈವ್ – Kannada News | Hoskote Serial Accident: PU Students’ Long Drive Turns Fatal, Overspeed and Negligence Suspected

ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್!Image Credit source: tv9

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ (Hoskote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದ (Serial Accident) ಬಗ್ಗೆ ಸ್ಫೋಟಕ ಮಾಹಿತಿ ಈಗ ಬಯಲಾಗಿದೆ. ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆಯೇ ಭೀಕರ ಸರಣಿ ಅಪಘಾತಕ್ಕೆ ಕಾರಣ ಎಂಬುದು ಈಗ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್​ ಯುವಿ 700 ಕಾರಿನಲ್ಲಿ ಬಂದಿದ್ದ ಆರು ಮಂದಿ ವಿದ್ಯಾರ್ಥಿಗಳು ಬೆಂಗಳೂರಿನ ಕಾಲೇಜೊಂದರಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದವರು ಎಂಬುದು ಗೊತ್ತಾಗಿದೆ. ನೂತನ ಹೆದ್ದಾರಿಯಲ್ಲಿ ಲಾಂಗ್ ಡ್ರೈವ್‌ಗೆ ಬಂದಿದ್ದ ವೇಳೆ ಅತಿವೇಗವಾಗಿ ಕಾರು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ.

ಅತಿವೇಗವಾಗಿ ಬಂದ ಕಾರು ಮೊದಲು ಗಗನ್ ಎಂಬವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ಯಾಂಟರ್ ವಾಹನದ ಆಕ್ಸಲ್ ಕಟ್ ಆಗಿ ಅದು ಸರ್ವೀಸ್ ರಸ್ತೆಗೆ ನೆಗೆದಿದೆ. ಈ ವೇಳೆ ರಸ್ತೆಯಲ್ಲಿ ಬಿದ್ದಿದ್ದ ಆಕ್ಸಲ್‌ಗೆ ಮತ್ತೊಂದು ಬ್ರೀಜಾ ಕಾರು ಡಿಕ್ಕಿ ಹೊಡೆದಿದ್ದು, ಅದರಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದು, ಪ್ರಕರಣದ ಕುರಿತು ಪೊಲೀಸರು ವಿಸ್ತೃತ ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಅತಿವೇಗವೇ ಪ್ರಮುಖ ಕಾರಣ ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಮೃತರ ಪೈಕಿ ಬೈಕ್ ಸವಾರ ಸ್ಥಳೀಯರಾಗಿದ್ದು, ಕಾರಿನಲ್ಲಿದ್ದವರು ಬೆಂಗಳೂರಿನ ಕೊತ್ತನೂರು ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​​ಪಿ ಚಂದ್ರಕಾಂತ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು

ಏತನ್ಮಧ್ಯೆ, ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *