ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇಂದು (ಭಾನುವಾರ, ಆಗಸ್ಟ್ 2, 2026) ಆಂಧ್ರಪ್ರದೇಶದ ಪವಿತ್ರ ಕ್ಷೇತ್ರವಾದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿರುವುದು ವಿಶೇಷ.
ಈ ಹಿಂದೆ ಅತ್ಯಂತ ವಿಶಿಷ್ಟವಾದ ‘ಪ್ಲಾಟಿನಂ ಬ್ಲಾಂಡ್ ಬಝ್ ಕಟ್’ ಹೇರ್ಸ್ಟೈಲ್ನೊಂದಿಗೆ ಮಿಂಚಿದ್ದ ಹಾರ್ದಿಕ್ ಪಾಂಡ್ಯ, ಈ ಬಾರಿ ಕೇಶ ಮುಂಡನದೊಂದಿಗೆ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಬೋಳು ತಲೆ ಲುಕ್ನಲ್ಲಿರುವ ಪಾಂಡ್ಯ ಅವರ ಹೊಸ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮುಂಜಾನೆಯ ವಿಶೇಷ ದರ್ಶನ:
ಹಾರ್ದಿಕ್ ಪಾಂಡ್ಯ ಅವರು ಮುಂಜಾನೆ ನಡೆದ ಪವಿತ್ರ ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡು, ಶ್ರೀವಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಿರುಮಲ ಬೆಟ್ಟಕ್ಕೆ ಆಗಮಿಸಿದ ಕ್ರಿಕೆಟಿಗನನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಅಧಿಕಾರಿಗಳು ಮತ್ತು ಅರ್ಚಕರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡು ದರ್ಶನಕ್ಕೆ ವ್ಯವಸ್ಥೆ ಮಾಡಿದರು.
ಈ ಆಧ್ಯಾತ್ಮಿಕ ಭೇಟಿಯ ವೇಳೆ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಅವರ ಆಪ್ತ ಗೆಳತಿ ಮಹಿಕಾ ಶರ್ಮಾ ಕೂಡ ಜೊತೆಯಲ್ಲಿದ್ದರು.
ದರ್ಶನದ ನಂತರ ದೇವಸ್ಥಾನದ ರಂಗನಾಯಕುಲ ಮಂಟಪದಲ್ಲಿ ಅರ್ಚಕರು ಇವರಿಗೆ ವೇದ ಆಶೀರ್ವಚನ ನೀಡಿ, ತೀರ್ಥ ಪ್ರಸಾದಗಳನ್ನು ವಿತರಿಸಿದರು.
VIDEO | Tirupati, Andhra Pradesh: Indian cricketer Hardik Pandya offers prayers during the Suprabhata Seva at the Sri Venkateswara Swamy Temple in Tirumala.
(Full video available on PTI Videos – https://t.co/n147TvrpG7) pic.twitter.com/HKdtPmcyC3
— Press Trust of India (@PTI_News) August 2, 2026
ಪಾಂಡ್ಯ ಕಂಬ್ಯಾಕ್ ಯಾವಾಗ?
ಗಾಯದ ಸಮಸ್ಯೆಯಿಂದಾಗಿ ಕಳೆದ ಕೆಲವು ಸರಣಿಗಳಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಇದೀಗ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡಕ್ಕೂ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವೈದ್ಯಕೀಯ ಮಂಡಳಿ ಖಚಿತಪಡಿಸಿದೆ. ಹೀಗಾಗಿ ಏಕದಿನ ಹಾಗೂ ಟಿ20 ಪಂದ್ಯಗಳಿಗೆ ಪಾಂಡ್ಯ ಆಯ್ಕೆಗೆ ಲಭ್ಯರಾಗಲಿದ್ದಾರೆ.
ಪಾಂಡ್ಯ ಮುಂದಿದೆ ಮಹಾ ಗುರಿ:
ಹಾರ್ದಿಕ್ ಪಾಂಡ್ಯ ಈಗಾಗಲೇ ಟಿ20 ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಾರೆ. ಇದಾಗ್ಯೂ ಏಕದಿನ ವಿಶ್ವಕಪ್ ಎಂಬುದು ಅವರ ಬಹುದೊಡ್ಡ ಕನಸು. ಈ ಕನಸನ್ನು ನನಸು ಮಾಡಿಕೊಳ್ಳಲು ಸಿದ್ಧತೆಗಳನ್ನು ಶುರು ಮಾಡಿದ್ದಾರೆ. ಅಂದರೆ 2027ರ ಏಕದಿನ ವಿಶ್ವಕಪ್ ಹಾಗೂ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು ಅವರ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಹೊಸ ಇತಿಹಾಸ ಬರೆದ ಭಾರತೀಯ ಯೋಧ!
ಇದಕ್ಕಾಗಿ ಸಂಪೂರ್ಣ ಫಿಟ್ನೆಸ್ ಸಾಧಿಸಲು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಈ ಅಭ್ಯಾಸದ ಭಾಗವಾಗಿ ಪ್ರತಿದಿನ 12 ಓವರ್‌ಗಳವರೆಗೆ ಬೌಲಿಂಗ್ ಮಾಡುತ್ತಿದ್ದಾರೆ. ಈ ಮೂಲಕ ಏಕದಿನ ಪಂದ್ಯಗಳಲ್ಲಿ ಪೂರ್ಣ 10 ಓವರ್ಗಳನ್ನು ಎಸೆಯಲು ಸಿದ್ಧತೆಗಳನ್ನು ಶುರು ಮಾಡಿದ್ದಾರೆ.