ಹೊಸ ಹೆಜ್ಜೆ ಇಟ್ಟ ಕೆವಿಎನ್ ಸಂಸ್ಥೆ; ಚಿರಂಜೀವಿ ಜೊತೆ ಬಿಗ್ ಬಜೆಟ್ ಸಿನಿಮಾ – Kannada News | KVN Productions Backs Chiranjeevi’s Mega 158: New Big Budget Action Film

‘ಟಾಕ್ಸಿಕ್’, ‘ಕೆಡಿ’, (KD Movie) ‘ಜನ ನಾಯಗನ್’ ರೀತಿಯ ಬಿಗ್ ಬಜೆಟ್ ಸಿನಿಮಾ ನಿರ್ಮಿಸೋ ಕೆವಿಎನ್ ಸಂಸ್ಥೆ ಈಗ ಹೊಸ ಹೆಜ್ಜೆ ಇಟ್ಟಿದೆ. ಚಿರಂಜೀವಿ ಅವರ 158ನೇ ಸಿನಿಮಾಗೆ ಈ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಮೆಗಾ 158’ ಎಂದು ಹೆಸರಿಡಲಾಗಿದೆ. ಸಿನಿಮಾದ ಮುಹೂರ್ತ ಇಂದು (ಮೇ 21) ಅದ್ದೂರಿಯಾಗಿ ನೆರವೇರಿದೆ. ಆಂಧ್ರ ಪ್ರದೇಶದ ಉಪಮುಖ್ಯಮಂಯತ್ರಿ ಪವನ್ ಕಲ್ಯಾಣ್, ಚಿರಂಜೀವಿ ಸಹೋದರ, ನಟ ಪವನ್ ಕಲ್ಯಾಣ್ ಅವರು ಸಿನಿಮಾಗೆ ಕ್ಲ್ಯಾಪ್ ಮಾಡಿದ್ದಾರೆ.

ಕೆವಿಎನ್ ಸಂಸ್ಥೆ ಈಗಾಗಲೇ ಮೂರು ಸಿನಿಮಾಗಳಿಂದ ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಈ ಪೈಕಿ ‘ಕೆಡಿ’ ಸಿನಿಮಾ ರಿಲೀಸ್ ಆಗಿದೆ. ‘ಟಾಕ್ಸಿಕ್’ ಹಾಗೂ ‘ಜನ ನಾಯಗನ್’ ತೆರೆಗೆ ಬರೋ ಬಗ್ಗೆ ಸದ್ಯಕ್ಕೆ ಯಾವುದೇ ಅಪ್​​ಡೇಟ್​ ಇಲ್ಲ. ಹೀಗಿರುವಾಗಲೇ ‘ಮೆಗಾ 158’ ಅನೌನ್ಸ್ ಆಗಿದೆ. ಈ ಹಿಂದೆ ‘ವಾಲ್ತೇರು ವೀರಯ್ಯ’ ಸಿನಿಮಾ ನೀಡಿದ್ದ ಬಾಬಿ ಕೊಲ್ಲಿ ಅವರೇ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿರಂಜೀವಿ ಹಾಗೂ ಬಾಬಿ ಕಾಂಬಿನೇಷನ್‌ನ ಎರಡನೇ ಸಿನಿಮಾ ಇದಾಗಿದೆ.

ಚಿತ್ರದ ಮುಹೂರ್ತ ಸಮಾರಂಭವು ಇಂದು ಮೇ ಅದ್ಧೂರಿಯಾಗಿ ನೆರವೇರಿದೆ. ಇದೊಂದು ಹೈ-ವೋಲ್ಟೇಜ್ ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾ ಎನ್ನಲಾಗಿದೆ. ಆಕ್ಷನ್ ಪಾತ್ರಕ್ಕಾಗಿ ಚಿರಂಜೀವಿ ಅವರು ಜಿಮ್‌ನಲ್ಲಿ ಕಠಿಣ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಈ ಚಿತ್ರವು 2027ರ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸೋಮವಾರವೂ ‘ಕೆಡಿ’ ಭರ್ಜರಿ ಕಲೆಕ್ಷನ್; ಕೆವಿಎನ್​​ಗೆ ಒಂದೇ ದಿನ ಡಬಲ್ ಧಮಾಕ

ಕೆವಿಎನ್ ಸಿನಿಮಾ ದೊಡ್ಡ ದೊಡ್ಡ ರಿಸ್ಕ್​​ಗಳನ್ನು ತೆಗೆದುಕೊಳ್ಳುತ್ತಿದೆ. ಸಿನಿಮಾ ಬಜೆಟ್​ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುತ್ತಿಲ್ಲ. ‘ಕೆಡಿ’ ಹಾಗೂ ‘ಟಾಕ್ಸಿಕ್’ ರಿಲೀಸ್ ಆದರೆ, ನಿರ್ಮಾಪಕರು ಲಾಭ ಕಾಣಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *