
ದೆಹಲಿ, ಮಾ.21: ಕಳೆದ ಕೆಲವು ದಿನಗಳಿಂದ ಎಲ್ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ.
ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ (Community Kitchens) ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಗ್ಯಾಸ್ ಟ್ರಬಲ್: ಹೋಟೆಲ್ ಮಾಲೀಕರು ವಿಲ ವಿಲ; ಸೌದೆ ಒಲೆ ದರ ದುಪ್ಪಟ್ಟು
ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ (FTL) ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ