ಮಂಡ್ಯ, ಜುಲೈ 31: ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಪ್ರಾಣ ಕಳೆದುಕೊಂಡಿರುವ ಘಟನೆ ನಡೆದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತ ದಂಪತಿಯ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ರೈತ ದಂಪತಿ 11 ರಿಂದ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 90,000 ರೂ. ಸಾಲವಿದ್ದು, ಇತರೆ ಬ್ಯಾಂಕ್ಗಳಲ್ಲಿ, ಮುಖ್ಯವಾಗಿ ಎಚ್ಡಿಎಫ್ಸಿ ಬ್ಯಾಂಕ್ನಲ್ಲೂ ಸಾಲವಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಕೃಷಿ ಉದ್ದೇಶಗಳಿಗಾಗಿ ಈ ಸಾಲವನ್ನು ಪಡೆಯಲಾಗಿತ್ತು ಎನ್ನಲಾಗಿದೆ. ಸಾಲದ ನೋಟಿಸ್ಗಳಿಂದ ಮನನೊಂದು ದಂಪತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.