IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಆದರೆ ಇದು ಅಂತಿಂಥ ಸೋಲಲ್ಲ. ಬದಲಾಗಿ 19 ವರ್ಷಗಳ ಕಂಡಂತಹ ಅತ್ಯಂತ ಹೀನಾಯ ಸೋಲು.
ಗುವಾಹಟಿಯ ಬರ್ಸಪಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್ಗಳಲ್ಲಿ 127 ರನ್ಗಳಿಸಿ ಆಲೌಟ್ ಆಯಿತು.
ಈ ಸುಲಭ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೇವಲ 12.1 ಓವರ್ಗಳಲ್ಲಿ 128 ರನ್ಗಳಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಬರೋಬ್ಬರಿ 47 ಎಸೆತಗಳನ್ನು ಬಾಕಿಯಿರಿಸಿ ಪಂದ್ಯವನ್ನು ಗೆದ್ದುಕೊಂಡಿದ್ದಾರೆ. ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಒಮ್ಮೆಯೂ ಇಷ್ಟೊಂದು ಬಾಲ್ಗಳ ಅಂತರದಿಂದ ಸೋತಿರಲಿಲ್ಲ.
ಇದಕ್ಕೂ ಮುನ್ನ 2012 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 21 ಎಸೆತಗಳ ಅಂತರದಿಂದ ಸೋತಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂತ್ಯಂತ ಹೀನಾಯ 'ಆರಂಭಿಕ ' ಸೋಲಾಗಿತ್ತು. ಇದೀಗ ಮೊದಲ ಪಂದ್ಯದಲ್ಲೇ ಸಿಎಸ್ಕೆ ತಂಡವನ್ನು 12.1 ಓವರ್ಗಳಲ್ಲಿ ಬಗ್ಗು ಬಡಿದು ರಾಜಸ್ಥಾನ್ ರಾಯಲ್ಸ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಸಿಎಸ್ಕೆ ತಂಡವನ್ನು ಮೊದಲ ಮ್ಯಾಚ್ನಲ್ಲಿ ಅತ್ಯಂತ ಹೀನಾಯವಾಗಿ ಸೋಲಿಸಿದ ಹೆಗ್ಗಳಿಕೆಯನ್ನು ಆರ್ಆರ್ ಪಡೆ ತನ್ನದಾಗಿಸಿಕೊಂಡಿದೆ.




