20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಟಿಬಿ ಜಯಚಂದ್ರ

20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಟಿಬಿ ಜಯಚಂದ್ರ

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರಚನೆಯ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಶಾಸಕರು ಈ ವಿಷಯವಾಗಿ ದೆಹಲಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಯಾವುದೇ ನಿರ್ದಿಷ್ಟ ನಾಯಕತ್ವ ಹೆಸರಿನಲ್ಲಲ್ಲದೆ, ಮೂರು, ನಾಲ್ಕು, ಐದು ಬಾರಿ ಶಾಸಕರಾಗಿರುವ ಅನುಭವಿಗಳು ಒಟ್ಟಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಶಾಸಕರ ದೆಹಲಿ ಪ್ರವಾಸದ ಬಗ್ಗೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟದ ಅವಧಿ ಮೂರು ವರ್ಷಗಳನ್ನು ಪೂರೈಸಿದ್ದು, ಮುಂದಿನ ಎರಡು ವರ್ಷಗಳಲ್ಲಿ ರಾಜಕೀಯ ಏರುಪೇರುಗಳನ್ನು ಗಮನದಲ್ಲಿಟ್ಟುಕೊಂಡು ಇತರರಿಗೂ ಅವಕಾಶ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಈ ಮನವಿಯನ್ನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಮಂಡಿಸಲಾಗುವುದು ಎಂದು ಜಯಚಂದ್ರ ತಿಳಿಸಿದ್ದಾರೆ.

ಸಚಿವ ಸಂಪುಟ ಪುನರಚನೆಗೆ ರಾಜಕೀಯ ಲೆಕ್ಕಾಚಾರಗಳು ಪ್ರಮುಖ ಕಾರಣವಾಗಿದ್ದು, 2028ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸೂಕ್ತ ಕಾರ್ಯತಂತ್ರ ರೂಪಿಸುವುದು ಮುಖ್ಯ ಎಂದು ಶಾಸಕರು ಅಭಿಪ್ರಾಯಪಟ್ಟಿದ್ದಾರೆ. ವರಿಷ್ಠರ ನಿರ್ಧಾರವೇ ಅಂತಿಮವಾಗಿರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೂ ಈ ಭೇಟಿಯ ವಿಷಯವನ್ನು ತರಲಾಗಿದ್ದು, ಅವರು ಮುಕ್ತ ಮನಸ್ಸಿನಿಂದ ಸಮ್ಮತಿಸಿದ್ದಾರೆ ಎಂದು ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *