ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸೋಲನುಭವಿಸಿದೆ. ಬ್ರಿಸ್ಟಲ್ನ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಷಾರ್ಲೆಟ್ ಡೀನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು.
ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಸ್ಮೃತಿ ಮಂಧಾನ (33) ಹಾಗೂ ಶಫಾಲಿ ವರ್ಮಾ (22) ಉತ್ತಮ ಆರಂಭ ಒದಗಿಸಿದ್ದರು. ಇದಾದ ಬಳಿಕ ಬಂದ ಯಾಸ್ತಿಕಾ ಭಾಟಿಯಾ 33 ರನ್ಗಳ ಕೊಡುಗೆ ನೀಡಿದರು. ಇನ್ನು ನಾಯಕಿ ಹರ್ಮನ್ಪ್ರೀತ್ ಕೌರ್ 28 ರನ್ ಬಾರಿಸಿದ್ದರು.
ಈ ನಾಲ್ವರ ವಿಕೆಟ್ ಪತನಗೊಳ್ಳುತ್ತಿದ್ದಂತೆ ಟೀಮ್ ಇಂಡಿಯಾ ದಿಢೀರ್ ಕುಸಿತಕ್ಕೊಳಗಾಯಿತು. ಇದರ ಸಂಪೂರ್ಣ ಲಾಭ ಪಡೆದ ಇಂಗ್ಲೆಂಡ್ ಬೌಲರ್ಗಳು ರನ್ ಗತಿಯನ್ನು ನಿಯಂತ್ರಿಸಿದರು. ಪರಿಣಾಮ ಟೀಮ್ ಇಂಡಿಯಾ 20 ಓವರ್ಗಳನ್ನು ಆಡಿದರೂ 9 ವಿಕೆಟ್ ಕಳೆದುಕೊಂಡು 142 ರನ್ಗಳಿಸಲಷ್ಟೇ ಶಕ್ತರಾದರು.
ಈ ಮೂಲಕ ಇಂಗ್ಲೆಂಡ್ ತಂಡವು 26 ರನ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಮೂರನೇ ಟಿ20 ಪಂದ್ಯವು ಸರಣಿ ನಿರ್ಣಾಯಕವಾಗಿ ಮಾರ್ಪಟ್ಟಿದೆ.
