3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ ಜನರ ಅಸಮಾಧಾನ ಹೆಚ್ಚಿದೆ. ತಮ್ಮ ಸಮಸ್ಯೆಗಳನ್ನು ಕೇಳಲು ಸ್ಥಳಕ್ಕೆ ಅಧಿಕಾರಿಗಳು ಅಥವಾ ಕಾರ್ಪೊರೇಟರ್ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ನಾಗರಿಕರು ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಪುನರ್ಸ್ಥಾಪಿಸಲು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *