319 KAS ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಕೆ ಯಾವಾಗಿನಿಂದ? ಇಲ್ಲಿದೆ ವಿವರ – Kannada News | Karnataka Government Notifies Recruitment for 319 KAS Posts: Check Application Dates

ಕರ್ನಾಟಕ ಲೋಕಸೇವಾ ಆಯೋಗImage Credit source: kpsc.kar.nic.in

ಬೆಂಗಳೂರು, ಜುಲೈ 31: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’) ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಗುಡ್​​ ನ್ಯೂಸ್ ನೀಡಿದೆ.

319 ಹುದ್ದೆಗಳು

ಗ್ರೂಪ್ ‘ಎ’ ವಿಭಾಗದ 117 ಹುದ್ದೆಗಳು ಹಾಗೂ ಗ್ರೂಪ್ ‘ಬಿ’ ವಿಭಾಗದ 202 ಹುದ್ದೆಗಳಿವೆ. ಗ್ರೂಪ್ ‘ಎ’ ನಲ್ಲಿ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ಇಸಿಒ ಸೇರಿದಂತೆ ಪ್ರಮುಖ ಹುದ್ದೆಗಳಿದ್ದರೆ, ಗ್ರೂಪ್ ‘ಬಿ’ ನಲ್ಲಿ ತಹಶೀಲ್ದಾರ್, ವಾಣಿಜ್ಯ ತೆರಿಗೆ ಅಧಿಕಾರಿ, ಮುಖ್ಯಾಧಿಕಾರಿ ಮುಂತಾದ ಹುದ್ದೆಗಳಿವೆ. ಒಟ್ಟು ಹುದ್ದೆಗಳಲ್ಲಿ 297 ಮೂಲ ವೃಂದ ಹಾಗೂ 22 ಹೈದರಾಬಾದ್ ಕರ್ನಾಟಕಕ್ಕೆ ಸೇರಿವೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ?

ಅರ್ಹ ಅಭ್ಯರ್ಥಿಗಳು ಆಗಸ್ಟ್ 1 ರಿಂದ ಆಗಸ್ಟ್ 31ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪೂರ್ವಭಾವಿ ಪರೀಕ್ಷೆಯನ್ನು ನವೆಂಬರ್ 15 ರಂದು ನಡೆಸಲು ತಾತ್ಕಾಲಿಕವಾಗಿ ದಿನಾಂಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ್ಚರಿಕೆ

ಇನ್ನು ಮುಖ್ಯ ಪರೀಕ್ಷೆಗಳು 2027 ಫೆಬ್ರವರಿ 12 ರಿಂದ 18ರ ವರೆಗೆ ನಡೆಯಲಿದ್ದು, ಏಪ್ರಿಲ್ ​​27 ರಂದು ಮೇನ್ಸ್ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಮೇ 10ರಿಂದ 31ರವರೆಗೆ ಸಂದರ್ಶನ ನಡೆಯಲಿದ್ದು, ಜೂನ್ 5ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಲಿದೆ.

ಇದನ್ನೂ ಓದಿ: ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ: 3,991 ಹುದ್ದೆಗಳಿಗೆ 4.54 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು; ಇಂಜಿನಿಯರಿಂಗ್‌, ಪಿಎಚ್‌ಡಿ ಪದವೀಧರರಿಂದಲೂ ಅರ್ಜಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 600 ರೂ. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 300 ರೂ, ಮಾಜಿ ಸೈನಿಕರಿಗೆ 50 ರೂ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೆ ಮುಂಚಿತವಾಗಿಯೇ ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:16 pm, Fri, 31 July 26

Source link

Leave a Reply

Your email address will not be published. Required fields are marked *