3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ

3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ

ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ‘ಕೊರಗಜ್ಜ’ (Koragajja) ಸಿನಿಮಾ ಚಿತ್ರೀಕರಣದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವು ವಿಶೇಷ ಕಾರಣಗಳಿಗೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಸಿನಿಮಾ ತಂಡದಿಂದ ಹೊರಬಿದ್ದಿರುವ ಹೊಸ ಅಪ್​​ಡೇಟ್ ಎಂದರೆ ‘ಕೊರಗಜ್ಜ’ ಸಿನಿಮಾ ಇದೀಗ 3ಡಿ ತಂತ್ರಜ್ಙಾನದೊಂದಿಗೆ ಬಿಡುಗಡೆ ಆಗಲಿದೆ.

ಸಾಮಾನ್ಯವಾಗಿ ಚಿತ್ರೀಕರಣದ ವೇಳೆಯಲ್ಲೇ 3ಡಿ ಶೂಟಿಂಗ್ ಮಾಡುವುದು ಸಂಪ್ರದಾಯ. ಆದರೆ ‘ಕೊರಗಜ್ಜ’ ಸಿನಿಮಾವನ್ನು 2ಡಿ ತಂತ್ರಜ್ಞಾನದಲ್ಲಿ ಶೂಟಿಂಗ್ ಮಾಡಲಾಗಿದೆ. ಆದರೆ ಈಗ ಅದನ್ನು 3ಡಿಗೆ ಬದಲಾಯಿಸಲಾಗುತ್ತಿದೆ. 2ಡಿ ಯಲ್ಲಿ ಶೂಟಿಂಗ್ ಮಾಡಿ ಮತ್ತೆ 3ಡಿ ಗೆ ಕನ್ವರ್ಟ್ ಮಾಡುವುದು ಹೆಚ್ಚು ದುಬಾರಿ. ಆದರೆ ಕೆಲವರ ಸಲಹೆ ಮೇರೆಗೆ ಸಿನಿಮಾವನ್ನು 3ಡಿಗೆ ಬದಲಾಯಿಸಲಾಗಿದೆ. ಪ್ರೇಕ್ಷಕರಿಗೆ ಒಳ್ಳೆಯ ಅನುಭವ ನೀಡಲು, ಸಿನಿಮಾವನ್ನು ಬೇರೆ ಬೇರೆ ಭಾಷೆಯರಿಗೆ ತಲುಪುವಂತೆ ಮಾಡಲು 3ಡಿ ತಂತ್ರಜ್ಞಾನದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

2ಡಿಯಲ್ಲಿ ಚಿತ್ರೀಕರಣಗೊಂಡ ಸಿನಿಮಾವನ್ನು ದುಬಾರಿ ವೆಚ್ಚದಲ್ಲಿ 3ಡಿ ತಂತ್ರಜ್ಞಾನಕ್ಕೆ ಬದಲಾವಣೆ ಮಾಡಲಾಗುತ್ತಿದ್ದು, ಸುಮಾರು 40 ಮಂದಿ ತಂತ್ರಜ್ಞರ ತಂಡ ಈ ಕಾರ್ಯದಲ್ಲಿ ತೊಡಗಿದೆ ಎಂದು ನಿರ್ದೇಶಕ ಸುಧೀರ್ ಅತ್ತಾವರ ತಿಳಿಸಿದ್ದಾರೆ.

ಇದನ್ನೂ ಓದಿ:‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ?

ಇದರ ಜೊತೆಗೆ ‘ಕೊರಗಜ್ಜ’ ಸಿನಿಮಾದ ಚಿತ್ರೀಕರಣವನ್ನು ನೀರಿನ ಅಡಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ನಟಿ ಶ್ರುತಿ ಹಾಗೂ ಇನ್ನೂ ಕೆಲವು ಕಲಾವಿದರು ಈ ಅಂಡರ್​​ವಾಟರ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕೇರಳದ ತಿರುವನಂತಪುರಂ ನಲ್ಲಿ ಖ್ಯಾತ ಮಲಯಾಳಂ ನಟ ಮೋಹನ್ ಲಾಲ್ ರವರ ಒಡೆತನ ದಲ್ಲಿದ್ದ “ವಿಸ್ಮಯ” ಸ್ಟುಡಿಯೋದಲ್ಲಿ ಅಂಡರ್ ವಾಟರ್ ನ ವಿಶೇಷ ಸೆಟ್ ನಿರ್ಮಿಸಿ ನಟಿ ಶ್ರತಿ ಅಭಿನಯಿಸಿದ ಭಾಗಗಳನ್ನು ನೀರಿನ ಅಡಿಯಲ್ಲಿ ಖ್ಯಾತ ಮಲಯಾಳಂ ಸಿನೆಮಾಟೋಗ್ರಾಫರ್ ಮನೋಜ್ ಪಿಳ್ಳೈ ನಾಲ್ಕು ಕ್ಯಾಮರಗಳಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ.

ಈ ವಿಶೇಷ ಶೈಲಿಯ ಚಿತ್ರೀಕರಣಕ್ಕಾಗಿ ಶ್ರತಿ ಸುಮಾರು 15ದಿನಗಳ ತಯಾರಿ ಪಡೆದಿದ್ದಾಗಿ ಹೇಳಿದೆ ಚಿತ್ರತಂಡ. ಶೂಟಿಂಗ್ ವೇಳೆ ಮಾರ್ಗದರ್ಶನಕ್ಕಾಗಿ ಸ್ಕ್ಯೂಬಾ ಡೈವರ್ಸ್ ಗಳನ್ನು ನಿಯೋಜಿಸಲಾಗಿತ್ತು. ಅಲ್ಲದೆ ಆಂಬ್ಯಲೆನ್ಸ್ ಮತ್ತು ವೈದ್ಯರ ತಂಡ ಕೂಡಾ ಸ್ಥಳದಲ್ಲಿ ಮೊಕ್ಕಾಂ ಹೂಡಿತ್ತು. ಹಾರ್ನೆಸ್ ನಲ್ಲಿ ಸುಮಾರು 30ಅಡಿ ಎತ್ತರದಿಂದ ನೀರಿಗೆ ಜಿಗಿದು ಮತ್ತೆ ಹಾರಿ ಹೊರಬರುವ ಮೈ ನವಿರೇಳಿಸುವ ಅಪಾಯಕಾರಿ ಸ್ಟಂಟ್ ನಲ್ಲಿ ನಟಿ ಶ್ರತಿ ಸ್ವತಃ ಅಭಿನಯಿಸಿ ಎಲ್ಲರನ್ನು ದಂಗು ಬಡಿಸಿದರು.ಇದಲ್ಲದೆ ನೀರಿನೊಳಗೆ 22 ಸೆಕೆಂಡ್ ಗಳ ಕಾಲ ಯಾವುದೇ ಆಮ್ಲಜನಕದ ಸಹಾಯವಿಲ್ಲದೆ ಶ್ರತಿ ಅಭಿನಯಿಸಿ ಎಲ್ಲರನ್ನು ದಂಗುಬಡಿಸಿದರು ಎಂದು ಚಿತ್ರತಂಡ ಹೇಳಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *