4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಡ್ಯಾಂ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು! – Kannada News | No Tungabhadra water release now for kharif crop irrigation

ಕೊಪ್ಪಳ, (ಜುಲೈ 03): ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯ ಖಾಲಿ ಖಾಲಿಯಾಗಿದೆ. ಹೀಗಾಗಿ ಮುಂಗಾರು ಬೆಳೆಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ. ಸರ್ಕಾರದ ಆದೇಶದಂತೆ ಸದ್ಯ ಲಭ್ಯವಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಲಾಗುವುದು. ರೈತರು ಸಹಕರಿಸಬೇಕು ಹಾಗೂ ಮುಂದೆ ಜಲಾಶಯ ಭರ್ತಿಯಾದರೆ ನೀರು ಹರಿಸುವ ಬಗ್ಗೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದೆ. ಇದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *