ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್ಗಳಲ್ಲಿ 169 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 53 ರನ್ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಷ್ಟಕ್ಕೆ ಸಿಲುಕಿತ್ತು.
ಈ ಹಂತದಲ್ಲಿ ಕಣಕ್ಕಿಳಿದ ಶೆರ್ಫೇನ್ ರದರ್ಫೋರ್ಡ್ ಹಾಗೂ ರೋವ್ಮನ್ ಪೊವೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ನಡುವೆ 33 ರನ್ ಬಾರಿಸಿ ಪೊವೆಲ್ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಕೊನೆಯ 12 ಎಸೆತಗಳಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ 29 ರನ್ಗಳ ಅವಶ್ಯಕತೆಯಿತ್ತು.
ಈ ವೇಳೆ ಕ್ರೀಸ್ಗೆ ಆಗಮಿಸಿದ ಜೇಸನ್ ಹೋಲ್ಡರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ದುಷ್ಮಂತ ಚಮೀರಾ ಎಸೆದ 19ನೇ ಓವರ್ಗಳಲ್ಲಿ 6 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಹೋಲ್ಡರ್ 20 ರನ್ ಚಚ್ಚಿದರು. ಈ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದರು.
ಅದರಂತೆ ಅಂತಿಮ ಓವರ್ನಲ್ಲಿ 6 ರನ್ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು 19.4 ಓವರ್ಗಳಲ್ಲಿ 170 ರನ್ ಬಾರಿಸುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
420ರ ಸ್ಟ್ರೈಕ್ ರೇಟ್:
ಈ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಎದುರಿಸಿದ್ದು ಕೇವಲ 5 ಎಸೆತಗಳನ್ನು ಮಾತ್ರ. ಈ ಐದು ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ಗಳೊಂದಿಗೆ 21 ರನ್ ಬಾರಿಸಿದ್ದರು. ಅಂದರೆ ಬರೋಬ್ಬರಿ 420 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಇದನ್ನೂ ಓದಿ: ತಾಂತ್ರಿಕ ದೌರ್ಬಲ್ಯ ಬಹಿರಂಗ? ಮತ್ತೆ ವಿಫಲನಾದ ವೈಭವ್ ಸೂರ್ಯವಂಶಿ..!
ಶ್ರೀಲಂಕಾ ಕಾಯುವಿಕೆ ಮುಂದುವರಿಕೆ:
ಈ ಸೋಲಿನೊಂದಿಗೆ ಕೆರಿಬಿಯನ್ ದ್ವೀಪದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಗೆಲ್ಲುವ ಶ್ರೀಲಂಕಾ ತಂಡದ ಅತೀ ದೊಡ್ಡ ಕನಸು ಮುಂದುವರೆದಿದೆ. ಅಂದರೆ ವೆಸ್ಟ್ ಇಂಡೀಸ್ ನೆಲದಲ್ಲಿ ವಿಂಡೀಸ್ ಪಡೆಯ ವಿರುದ್ಧ ಶ್ರೀಲಂಕಾ ತಂಡ ಈವರೆಗೆ ಒಂದೇ ಒಂದು ಟಿ20 ಸರಣಿ ಗೆದ್ದಿಲ್ಲ. ಈ ಬಾರಿ ಗೆಲ್ಲುವ ಉತ್ತಮ ಅವಕಾಶವಿತ್ತು. ಆದರೆ 19ನೇ ಓವರ್ನಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿ ಜೇಸನ್ ಹೋಲ್ಡರ್ ಶ್ರೀಲಂಕಾ ತಂಡದ ಕನಸನ್ನು ಭಗ್ನಗೊಳಿಸಿದ್ದಾರೆ.