ನವದೆಹಲಿ, ಏಪ್ರಿಲ್ 29: ಈಗಾಗಲೇ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ (Assermbly Electiopns 2026) ನಡೆದಿದೆ. ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶಗಳ ಮೊದಲು ಎಲ್ಲರ ಗಮನವು ಚುನಾವಣೋತ್ತರ ಸಮೀಕ್ಷೆಗಳ (Exit Poll Results) ಮೇಲೆ ಇದೆ. ಇದಿಗ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದ್ದು, ಯಾವ ಸಮೀಕ್ಷೆ ಏನು ಹೇಳುತ್ತದೆ ಎಂಬುದರ ಮಾಹಿತಿ ಇಲ್ಲಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ಎಕ್ಸಿಟ್ ಪೋಲ್ ಹೊರಬಿದ್ದಿದೆ. ಎಕ್ಸಿಟ್ ಪೋಲ್ ಪ್ರಕಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಗೆಲುವಿನ ನಗು ಬೀರಲಿದೆ. ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಬಹುಮತ ಪಡೆಯಲಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ. ಪುದುಚೆರಿಯ ಎಕ್ಸಿಟ್ ಪೋಲ್ ಫಲಿತಾಂಶ ಮಾತ್ರ ಹೊರಬೀಳುವುದು ಬಾಕಿ ಇದೆ.
ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆದರೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಿತು. ಇಂದು ಪಶ್ಚಿಮ ಬಂಗಾಳದ 2ನೇ ಮತ್ತು ಕೊನೆಯ ಹಂತದ ಮತದಾನ ನಡೆದಿದೆ. ನಿಖರವಾದ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ.
Published On – 6:55 pm, Wed, 29 April 26
