ಭಾರತ ಮತ್ತು ಝಿಂಬಾಬ್ವೆ ನಡುವಣ ಮೂರು ಮ್ಯಾಚ್ಗಳ ಟಿ20 ಸರಣಿ ಗುರುವಾರದಿಂದ (ಜು.23) ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಎಡಗೈ ದಾಂಡಿಗರ ದಂಡೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ಭಾರತ ತಂಡದಲ್ಲಿರುವ 9 ಬ್ಯಾಟರ್ಗಳಲ್ಲಿ ಆರು ಮಂದಿ ಎಡಗೈ ದಾಂಡಿಗರು. ಇವರಲ್ಲಿ ಬಹುತೇಕರು ಆಡುವ ಬಳಗದ ಖಾಯಂ ಸದಸ್ಯರು. ಹೀಗಾಗಿ ಝಿಂಬಾಬ್ವೆ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರು ಎಡಗೈ ಬ್ಯಾಟ್ಸ್ಮನ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಇಲ್ಲಿ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಕಣಕ್ಕಿಳಿಯುವುದು ಖಚಿತ. ಇವರಿಬ್ಬರು ಎಡಗೈ ದಾಂಡಿಗರು ಎಂಬುದು ವಿಶೇಷ. ಇನ್ನು ಮೂರನೇ ಕ್ರಮಾಂಕದಲ್ಲಿ ಲೆಫ್ಟ್ ಹ್ಯಾಂಡರ್ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ.
ನಾಲ್ಕನೇ ಕ್ರಮಾಂಕದಲ್ಲಿ ಬಲಗೈ ದಾಂಡಿಗ ಶ್ರೇಯಸ್ ಅಯ್ಯರ್ ಕಾಣಿಸಿಕೊಂದರೆ, ಐದನೇ ಕ್ರಮಾಂಕದಲ್ಲಿ ಮತ್ತೆ ಎಡಗೈ ದಾಂಡಿಗ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ.
ಆರನೇ ಮತ್ತು ಏಳನೇ ಕ್ರಮಾಂಕಗಳಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟರ್ಗಳಾದ ಶಿವಂ ದುಬೆ ಹಾಗೂ ರಿಂಕು ಸಿಂಗ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಆರು ಮಂದಿ ಎಡಗೈ ದಾಂಡಿಗರೇ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
ಇನ್ನು ಬೌಲರ್ಗಳಾಗಿ ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ಅಶೋಕ್ ಶರ್ಮಾ ಹಾಗೂ ಹರ್ಷ್ ದುಬೆ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ವೈಭವ್ ಸೂರ್ಯವಂಶಿ
- ಅಭಿಷೇಕ್ ಶರ್ಮಾ
- ಇಶಾನ್ ಕಿಶನ್
- ಶ್ರೇಯಸ್ ಅಯ್ಯರ್ (ನಾಯಕ)
- ತಿಲಕ್ ವರ್ಮಾ
- ಶಿವಂ ದುಬೆ
- ರಿಂಕು ಸಿಂಗ್
- ಹರ್ಷ್ ದುಬೆ
- ಮಯಾಂಕ್ ಯಾದವ್
- ಅಶೋಕ್ ಶರ್ಮಾ
- ಪ್ರಿನ್ಸ್ ಯಾದವ್
ಇದನ್ನೂ ಓದಿ: ನೋ ಬಾಲ್ ಎಸೆದರೆ ಬೌಲರ್ ಬೌಲ್ಡ್: 10 ಹೊಸ ನಿಯಮ ಪರಿಚಯಿಸಿದ ಬಿಸಿಸಿಐ
ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ , ಇಶಾನ್ ಕಿಶನ್ (ವಿಕೆಟ್ ಕೀಪರ್), ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ ಮತ್ತು ಮಯಾಂಕ್ ಯಾದವ್.