IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ.
ಅದರಂತೆ ಆರ್ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಬೌಲರ್ಗಳಾಗಿ ಆರ್ಸಿಬಿ ಪರ ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್ ಕಾಣಿಸಿಕೊಳ್ಳುವುದು ಖಚಿತ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಸುಯಶ್ ಶರ್ಮಾ ಕೂಡ ಸೇರ್ಪಡೆಯಾಗಲಿದ್ದಾರೆ.
ಅಂದರೆ ಆರುಬ್ಯಾಟರ್ಗಳು, ಇಬ್ಬರು ಆಲ್ರೌಂಡರ್ಗಳು ಮತ್ತು ನಾಲ್ವರು ಬೌಲರ್ಗಳೊಂದಿಗೆ ಆರ್ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಲಿದ್ದಾರೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ವಿರಾಟ್ ಕೊಹ್ಲಿ
- ಜೇಕಬ್ ಬೆಥೆಲ್
- ದೇವದತ್ ಪಡಿಕ್ಕಲ್
- ರಜತ್ ಪಾಟಿದಾರ್ (ನಾಯಕ)
- ಟಿಮ್ ಡೇವಿಡ್
- ಜಿತೇಶ್ ಶರ್ಮಾ
- ರೊಮಾರಿಯೊ ಶೆಫರ್ಡ್
- ಕೃನಾಲ್ ಪಾಂಡ್ಯ
- ಜೋಶ್ ಹೇಝಲ್ವುಡ್
- ಭುವನೇಶ್ವರ್ ಕುಮಾರ್
- ರಾಸಿಖ್ ದಾರ್
- ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).
ಫಿಲ್ ಸಾಲ್ಟ್ ಡೌಟ್!
ಬೆಂಗಳೂರಿನಲ್ಲಿ ನಡೆದ ಅಭ್ಯಾಸದ ವೇಳೆ ಗಾಯಗೊಂಡಿದ್ದ ಆರ್ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಏಪ್ರಿಲ್ 24 ರಂದು ನಡೆದ ಗುಜರಾತ್ ಟೈಟಾನ್ಸ್ ಮತ್ತು ಏಪ್ರಿಲ್ 27 ರಂದು ಜರುಗಿದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು.
ಇದೀಗ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಸಾಲ್ಟ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ನಾಳೆ (ಏ.30) ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಆರ್ಸಿಬಿ ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.
ಇದನ್ನೂ ಓದಿ: David Miller: ಕಿಲ್ಲರ್ ಮಿಲ್ಲರ್ ವಿಶ್ವ ದಾಖಲೆ