85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ – Kannada News | Karnataka Temple Revenue Boom: Kukke Subramanya and Kollur Mookambika Set New Income Records 2025 26

ಉಡುಪಿ, ಮೇ,13: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 2025-26ನೇ ಸಾಲಿನಲ್ಲಿ ದಾಖಲೆಯ ಆದಾಯ ಗಳಿಸಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನದ ಆದಾಯದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಒಟ್ಟು ವಾರ್ಷಿಕ ಆದಾಯ 85 ಕೋಟಿ ರೂಪಾಯಿ ತಲುಪಿದೆ.

ದೇವಸ್ಥಾನದ ಆದಾಯವು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಏರುಗತಿಯಲ್ಲಿದೆ. 2023-24ರಲ್ಲಿ 68 ಕೋಟಿ ರೂ., 2024-25ರಲ್ಲಿ 71 ಕೋಟಿ ರೂ. ಗಳಿಕೆ. 2025-26ರಲ್ಲಿ 85 ಕೋಟಿ ರೂ ದಾಟಿದೆ. ಇದೀಗ ಈ ಮೂಲಕ ಹೊಸ ದಾಖಲೆಯನ್ನು ಮಾಡಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿಸುದ್ದಿ: ದೇವಸ್ಥಾನದ ಹೊಸ ರೂಲ್ಸ್ ತಿಳಿದುಕೊಳ್ಳಿ

ಹೆಚ್ಚಳಕ್ಕೆ ಕಾರಣಗಳೇನು?

ಕರ್ನಾಟಕ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ‘ಕುಕ್ಕೆ ಸುಬ್ರಹ್ಮಣ್ಯ ದೇವಾಲಯ’ವು ಆದಾಯ ಗಳಿಕೆಯಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ದೇವಾಲಯವು ಬರೋಬ್ಬರಿ 167.89 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಮೂಲಕ ಸತತ 15ನೇ ವರ್ಷವೂ ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯ ಎಂಬ ಖ್ಯಾತಿಗೆ ಭಾಜನವಾಗಿದೆ. ಭಕ್ತರು ಅರ್ಪಿಸುವ ಕಾಣಿಕೆ, ವಿಶೇಷ ಸೇವೆಗಳಾದ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆ ಹಾಗೂ ದೇವಸ್ಥಾನದ ವಿವಿಧ ವಸತಿ ಗೃಹಗಳ ಬಾಡಿಗೆಯಿಂದ ಈ ಬೃಹತ್ ಮೊತ್ತದ ಆದಾಯ ಸಂಗ್ರಹವಾಗಿದೆ. ವರ್ಷದಿಂದ ವರ್ಷಕ್ಕೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಈ ಆರ್ಥಿಕ ಪ್ರಗತಿಗೆ ಸಾಕ್ಷಿಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ

ಭಕ್ತರ ಸಂಖ್ಯೆಯಲ್ಲಿನ ಗಣನೀಯ ಏರಿಕೆ ಮತ್ತು ಕಾಣಿಕೆಗಳ ಹೆಚ್ಚಳವೇ ಈ ದಾಖಲೆಯ ಆದಾಯಕ್ಕೆ ಪ್ರಮುಖ ಕಾರಣ. ವಿಶೇಷವಾಗಿ ನವರಾತ್ರಿ ಉತ್ಸವ, ವಾರಾಂತ್ಯದ ರಜೆಗಳು ಮತ್ತು ಇತರ ಹಬ್ಬಗಳ ಸಂದರ್ಭದಲ್ಲಿ ದೇಶದ ವಿವಿಧ ಮೂಲೆಗಳಿಂದ, ವಿಶೇಷವಾಗಿ ಕೇರಳ ಮತ್ತು ತಮಿಳುನಾಡಿನಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಗಳು ಮತ್ತು ಸೇವೆಗಳ ಸಂಖ್ಯೆಯೂ ಹೆಚ್ಚಾಗಿರುವುದು ಈ ಆರ್ಥಿಕ ಪ್ರಗತಿಗೆ ಸಾಕ್ಷಿಯಾಗಿದೆ.

ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಸಾಲಿಗಿಂತ ಈ ಬಾರಿ ಸುಮಾರು 13 ಕೋಟಿ ರೂ. ಅಧಿಕ ಆದಾಯ ಬಂದಿದೆ ಎಂದು ಖಚಿತಪಡಿಸಿದ್ದಾರೆ. ಈ ಆದಾಯವನ್ನು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳು ಮತ್ತು ಭಕ್ತರ ಮೂಲಭೂತ ಸೌಕರ್ಯಗಳ ವಿಸ್ತರಣೆಗೆ ಬಳಸಿಕೊಳ್ಳುವ ನಿರೀಕ್ಷೆಯಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *