ಭಾರತ ಟಿ20 ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿರುವ ಸ್ಫೋಟಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಸ್ಥಳೀಯ ಕ್ರಿಕೆಟ್ನಲ್ಲಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಪಂಜಾಬ್ ಅಂತರ ಜಿಲ್ಲಾ ಹಿರಿಯರ ಪಂದ್ಯಾವಳಿಯಲ್ಲಿ ಅಮೃತಸರ ಪುರುಷರ ಸೀನಿಯರ್ ತಂಡದ ಪರ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ Tarn Tara ಪುರುಷರ ಸೀನಿಯರ್ ತಂಡದ ವಿರುದ್ದ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ದ್ವಿಶತಕದ ಇನ್ನಿಂಗ್ಸ್ ಆಡಿದರು. ಅಭಿಷೇಕ್ ಅವರ ಈ ಅಬ್ಬರದ ಇನ್ನಿಂಗ್ಸ್ನಿಂದಾಗಿ ಅಮೃತಸರ ಪುರುಷರ ಸೀನಿಯರ್ ತಂಡವು 50 ಓವರ್ಗಳಲ್ಲಿ ಬರೋಬ್ಬರಿ 533 ರನ್ ಕಲೆಹಾಕಿತು.
91 ಎಸೆತಗಳನ್ನು ಎದುರಿಸಿ 233 ರನ್
ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ 91 ಎಸೆತಗಳನ್ನು ಎದುರಿಸಿ 233 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. 250 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ತಮ್ಮ ಈ ಇನ್ನಿಂಗ್ಸ್ನಲ್ಲಿ 15 ಬೌಂಡರಿ ಮತ್ತು 25 ಭರ್ಜರಿ ಸಿಕ್ಸರ್ಗಳನ್ನು ಬಾರಿಸಿದರು. ಇದರರ್ಥ ಅವರು ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ ಬೌಂಡರಿ ಮತ್ತು ಸಿಕ್ಸರ್ಗಳ ಸಹಾಯದಿಂದಲೇ 202 ರನ್ ಗಳಿಸಿದರು. ಈ 50 ಓವರ್ಗಳ ಪಂದ್ಯದಲ್ಲಿ, ಅಭಿಷೇಕ್ ಶರ್ಮಾ ಅವರ ದ್ವಿಶತಕ ಮತ್ತು ಅಭಯ್ ಚೌಧರಿ ಅವರ 91 ರನ್ಗಳ ಇನ್ನಿಂಗ್ಸ್ನಿಂದಾಗಿ ಅಮೃತಸರ ಪುರುಷರ ಸೀನಿಯರ್ ತಂಡವು 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 533 ರನ್ಗಳ ಬೃಹತ್ ಮೊತ್ತವನ್ನು ಗಳಿಸಿತು.
ABHISHEK SHARMA MAKES A STATEMENT 🔥
– He smashed 233 runs from just 91 balls with 15 fours & 25 sixes against Tarn Taran Men Sr in the One Day District match pic.twitter.com/QV4k83Oo5e
— Johns. (@CricCrazyJohns) August 2, 2026
ಕಳಪೆ ಫಾರ್ಮ್ನಲ್ಲಿ ಅಭಿಷೇಕ್
ಮೇಲೆ ಹೇಳಿದಂತೆ ಟಿ20 ವಿಶ್ವಕಪ್ನಿಂದಲೂ ಅಭಿಷೇಕ್ ಶರ್ಮಾ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಆದಾಗ್ಯೂ ಅವರಿಗೆ ತಂಡದಲ್ಲಿ ಸತತ ಅವಕಾಶಗಳನ್ನು ನೀಡಲಾಗುತ್ತಿದೆ. ಅಭಿಷೇಕ್ ತಮ್ಮ ಕೊನೆಯ ಏಳು ಟಿ20 ಅಂತರರಾಷ್ಟ್ರೀಯ ಇನ್ನಿಂಗ್ಸ್ಗಳಲ್ಲಿ ಒಂದೇ ಒಂದು ಅರ್ಧಶತಕವನ್ನು ಬಾರಿಸಿಲ್ಲ. ಇತ್ತೀಚೆಗೆ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಆಡಿದ ಮೂರು ಇನ್ನಿಂಗ್ಸ್ಗಳಲ್ಲಿ ಅಭಿಷೇಕ್ ಕ್ರಮವಾಗಿ 1, 8 ಮತ್ತು 2 ರನ್ ಗಳಿಸಿದ್ದರು. ಹೀಗಾಗಿ ಅಭಿಷೇಕ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದರು. ಆದರೀಗ ಸ್ಥಳೀಯ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿರುವ ಅಭಿಷೇಕ್ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.