ಬೆಂಗಳೂರು, ಫೆಬ್ರುವರಿ 01: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಜಾಯಿಂಟ್ ಕಮಿಷನರ್ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್.ಐ.ಟಿ) ರಚಿಸಲಾಗಿದ್ದು, ನಿನ್ನೆಯಿಂದಲೇ ತನಿಖೆ ಪ್ರಾರಂಭವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ತನಿಖಾ ವರದಿ ಬರುವವರೆಗೂ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗ ಯಾವುದೇ ಹೇಳಿಕೆ ನೀಡಿದರೆ ಅದು ಊಹಾಪೋಹಗಳಿಗೆ ಕಾರಣವಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರು ಐಟಿ, ಇಡಿ, ಸಿಬಿಐ ವಿಚಾರಗಳಲ್ಲಿ ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳ ಬಗ್ಗೆ ಕೇಳಿದಾಗ, ಯಾವುದೇ ಮಾಹಿತಿ ಅಥವಾ ವಿಚಾರಗಳು ತಿಳಿದಿಲ್ಲದೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಪರಮೇಶ್ವರ್ ತಿಳಿಸಿದರು. ತನಿಖಾ ವರದಿ ಬಂದ ನಂತರ ಎಲ್ಲ ವಿಷಯಗಳು ಸ್ಪಷ್ಟವಾಗಲಿವೆ ಮತ್ತು ಆ ಮಾಹಿತಿಯನ್ನು ಬಹಿರಂಗಪಡಿಸಲಾಗುವುದು ಎಂದು ಅವರು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.