Headlines

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ – Kannada News | Jayamala takes charge as new president of Karnataka Film Chamber of Commerce

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (Jayamala) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. 1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ (Karnataka Film Chamber of Commerce President) ಕಾರ್ಯ ನಿರ್ವಹಿಸಿದ್ದರು. ‘ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಅಧ್ಯಕ್ಷರು ಬಂದಿದ್ದಾರೆ. ಈ ವರ್ಷ ಒಳ್ಳೊಳ್ಳೆಯ ಕೆಲಸ ಮಾಡಲು ನಮಗೆಲ್ಲ ಸಹಕಾರಿ ನೀಡಿ, ಚಿತ್ರೋದ್ಯಮದ ಅಭಿವೃದ್ಧಿಗಾಗಿ ಕೆಲಸ ಮಾಡಲಿ’ ಎಂದು ನಿರ್ಮಾಪಕ ಕೆ. ಮಂಜು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *