ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ
ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ
ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ AQI 182 ಆಗಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲೂ ಕಡಿಮೆ ಆಗದ AQI, ಇಂದು 182ಕ್ಕೆ ತಲುಪಿದೆ.ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ
PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –180
- ಮಂಗಳೂರು-174
- ಮೈಸೂರು –175
- ಬೆಳಗಾವಿ – 156
- ಕಲಬುರ್ಗಿ-170
- ಶಿವಮೊಗ್ಗ – 182
- ಬಳ್ಳಾರಿ – 204
- ಹುಬ್ಬಳ್ಳಿ- 166
- ಉಡುಪಿ –176
- ವಿಜಯಪುರ –174
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.