ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.