Headlines

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು – Kannada News | Kamalakar Bhat Guruji’s Illicit Affair: Complaint Leads to Fatal Assault, One Dead in Siddapura, Uttara Kannada

ಆರೋಪಿಗಳು ಮತ್ತು ಮೃತ ವ್ಯಕ್ತಿImage Credit source: Tv9 Kannada

ಕಾರವಾರ, ಫೆಬ್ರವರಿ 03: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಏನು?

ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಕಮಲಾಕರ್​​ ಗುರೂಜಿ, ಸುಚಿತ್ರಾ, ಸುಚಿತ್ರಾ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ್ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: 10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು; ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *