ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. PDOಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ