Headlines

ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಟೀವ್ ಸ್ಮಿತ್ – Kannada News | Steve Smith signs up for PSL 2026

ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಅದು ಸಹ ಪಿಎಸ್​ಎಲ್​ನ ಹೊಸ ತಂಡವಾದ ಸಿಯಾಲ್ಕೋಟ್ ಸ್ಟಾಲಿಯನ್ಸ್ ಪರ ಎಂಬುದು ವಿಶೇಷ. ಅಂದರೆ ಈ ಬಾರಿಯ ಟೂರ್ನಿಯ ಮೂಲಕ ಸಿಯಾಲ್ಕೋಟ್ ಸ್ಟಾಲಿಯನ್ಸ್ ಫ್ರಾಂಚೈಸಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಎಂಟ್ರಿ ಕೊಡುತ್ತಿದೆ.

ಇದೀಗ ಈ ಫ್ರಾಂಚೈಸಿಯು ಸ್ಟೀವ್ ಸ್ಮಿತ್ ಅವರನ್ನು ನೇರ ಆಯ್ಕೆಯ ಮೂಲಕ ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಸ್ಮಿತ್ ಸಿಯಾಲ್ಕೋಟ್ ಸ್ಟಾಲಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಅಷ್ಟೇ ಅಲ್ಲದೆ ಈ ತಂಡದ ನಾಯಕನಾಗಿಯೂ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ಸಿಯಾಲ್ಕೋಟ್ ಸ್ಟಾಲಿಯನ್ಸ್ ತಂಡದ ಮುಖ್ಯ ಕೋಚ್ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಿಮ್ ಪೈನ್. ಇದೀಗ ಪೈನ್ ಸೂಚನೆಯ ಮೇರೆಗೆ ಸಿಯಾಲ್ಕೋಟ್ ಫ್ರಾಂಚೈಸಿಯು ಸ್ಟೀವ್ ಸ್ಮಿತ್ ಅವರನ್ನು ಮಾರ್ಕ್ಯೂ ಆಪ್ಷನ್ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಹೀಗಾಗಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಸ್ಟೀವ್ ಸ್ಮಿತ್ ನಾಯಕನಾಗಿ ಪಾದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಸ್ಮಿತ್ ಅತ್ಯುತ್ತಮ ನಾಯಕ ಎಂಬುದನ್ನು ಈಗಾಗಲೇ ನಿರೂಪಿಸಿದ್ದಾರೆ. ಅದರಲ್ಲೂ ಸ್ಟೀವ್ ಸ್ಮಿತ್ ಮುಂದಾಳತ್ವದಲ್ಲಿ ಆಸ್ಟ್ರೇಲಿಯಾ ಹಲವು ಟ್ರೋಫಿಗಳನ್ನು ಗೆದ್ದುಕೊಂಡಿದೆ.

ಅದರಲ್ಲೂ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಫ್ರೀಡಂ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು. ಹೀಗಾಗಿ ಸಿಯಾಲ್ಕೋಟ್ ಸ್ಟಾಲಿಯನ್ಸ್ ಫ್ರಾಂಚೈಸಿ ಕೂಡ ಸ್ಮಿತ್ ಅವರ ಮುಂದಾಳತ್ವದಲ್ಲೇ ತಂಡವನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

Published On – 8:59 am, Wed, 4 February 26

Source link

Leave a Reply

Your email address will not be published. Required fields are marked *