ಕಾರವಾರ, ಫೆಬ್ರವರಿ 04: ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಉತ್ತರ ಕನ್ನಡದ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ. ಈ ಅಕ್ರಮ ಸಂಬಂಧದ ವಿಚಾರದಲ್ಲಿ ವಾಗ್ವಾದ ನಡೆದು ವಸಂತ್ ಎಂಬುವವರ ಕೊಲೆ ಸಂಭವಿಸಿತ್ತು. ಮೃತ ವಸಂತ್ ಅವರು ಸುಚಿತ್ರಾ ಅವರ ಗಂಡನ ಸೋದರನಾಗಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಮಲಾಕರ್ ಭಟ್ ಅವರನ್ನು ಹತ್ತು ನಿಮಿಷಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದ ಪ್ರಸಂಗವೂ ನಡೆದಿದೆ. ಇನ್ನು ಪ್ರಕರಣ ಸಂಬಂಧ ಎ1 ಸುಚಿತ್ರಾ, ಎ2 ಲೋಕನಾಥ್, ಎ3 ಜ್ಯೋತಿಷಿ ಕಮಲಾಕರ ಭಟ್ ಮತ್ತು ಎ4 ಆಕಾಶ್ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್ಸಿ ಕೋರ್ಟ್ ಆದೇಶ ಮಾಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.