ಚಿಕ್ಕಮಗಳೂರು, ಫೆ.5: ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್ ವೈರಲ್ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ. ಈ ಬಗ್ಗೆ ಮಹಿಳೆ ಕೂಡ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ರಾಹಿಲ್ ನನ್ನ ಸ್ನೇಹಿತ ,ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು, ಅ ಸಮಯದಲ್ಲಿ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ