ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ.
ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ ತಪಾಸಣೆ ಮಾಡಿ, ಟ್ಯಾಗ್ ಮಾಡಿದ್ದರು. ಆದರೆ ದುಬೈ ತಲುಪಿದಾಗ ಬ್ಯಾಗ್‌ನಲ್ಲಿ ಆಭರಣಗಳು ಇರಲಿಲ್ಲ. ಈ ಕಳ್ಳತನದ ಹಿಂದೆ ವಿಮಾನ ನಿಲ್ದಾಣದ ಸಿಬ್ಬಂದಿಯ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸಂತ್ರಸ್ತ ಮಹಿಳೆ ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.