Headlines

ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ – Kannada News | Ballari Urea Raid: Illegal Fertilizer Hoarding Busted, 4000+ Bags Seized, Black Market Plot Uncovered

ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ

ಬಳ್ಳಾರಿ, ಫೆಬ್ರುವರಿ 07: ನಗರ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ (Illegal Fertilizer Hoarding ) ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.

ಕಾಳ ಸಂತೆಯಲ್ಲಿ ಮಾರುವ ಪ್ಲಾನ್ ನಡೆದಿತ್ತಾ?

ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್ ಎಂಬವರ ಮಾಲೀಕತ್ವದ ಗೋಡೌನ್‌ನಲ್ಲಿ ರೈತರಿಗೆ ವಿತರಿಸಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಹುನ್ನಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಳಿ ವೇಳೆ ಗೋಡೌನ್ ಮಾಲೀಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ, ಭಾರೀ ಆಕ್ರೋಶ

ಪ್ರಸ್ತುತ ಟಿಬಿ ಡ್ಯಾಂ ಗೇಟ್ ರಿಪೇರಿ ಹಿನ್ನೆಲೆಯಲ್ಲಿ ಎರಡನೇ ಬೆಳೆಗೆ ನೀರಿನ ಕೊರತೆ ಇರುವುದರಿಂದ ಬಳ್ಳಾರಿಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಕಡಿಮೆಯಾಗಿದೆ. ಈ ಸಂದರ್ಭದಲ್ಲೇ ಯೂರಿಯಾ ಸಂಗ್ರಹಿಸಿಡಲಾಗಿದೆ. ಜೂನ್ ತಿಂಗಳ ಮುಂಗಾರು ವೇಳೆ ಯೂರಿಯಾ ಗೊಬ್ಬರಕ್ಕೆ ಭಾರೀ ಬೇಡಿಕೆ ಉಂಟಾಗುವ ಸಾಧ್ಯತೆ ಇರುವುದರಿಂದ, ಈಗಿನಿಂದಲೇ ಅಕ್ರಮವಾಗಿ ಸ್ಟಾಕ್ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *