Headlines

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 127ಕ್ಕೆ ತಲುಪಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ. ಮೂರು ನಾಲ್ಕು ದಿನಗಳ ಹಿಂದೆ 100ರ ಆಸು ಪಾಸಿದ್ದ ಮಂಗಳೂರಿನ AQI, ಇಂದು 172ಕ್ಕೆ ತಲುಪಿದ್ದು ಆಶ್ಚರ್ಯ ಉಂಟು ಮಾಡಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –127
  • ಮಂಗಳೂರು-173
  • ಮೈಸೂರು –154
  • ಬೆಳಗಾವಿ – 166
  • ಕಲಬುರ್ಗಿ-153
  • ಶಿವಮೊಗ್ಗ – 156
  • ಬಳ್ಳಾರಿ – 155
  • ಹುಬ್ಬಳ್ಳಿ- 151
  • ಉಡುಪಿ –172
  • ವಿಜಯಪುರ –150

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *