ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಪೊಲೀಸ್​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು – Kannada News | Bangaluru: Madanayakanahalli Police Crack Ramdev Jewelers Robbery; 5 Arrested for Gunpoint Heist

ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (Robbery). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (Arrest).

ಬಂಧಿತರು

ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್​​ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು: ಬೆಂಗಳೂರಿನಲ್ಲಿ ಗನ್​ ತೋರಿಸಿ ಬಂಗಾರದ ಅಂಗಡಿ ಲೂಟಿ

ಕಳೆದ ವಾರವಷ್ಟೇ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸಪುರದ ರಾಮ್ ದೇವ್ ಜ್ಯವೆಲರ್ಸ್​​ನಲ್ಲಿ ಈ ಭಯಾನಕ ದರೋಡೆ ನಡೆದಿತ್ತು. ದರೋಡೆಕೋರರು ಗನ್ ತೋರಿಸಿ 30 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಐವರು ಆರೋಪಿಗಳನ್ನ ಮಾದನಾಯಕನಹಳ್ಳಿ ಪೊಲಿಸರು ಬಂಧಿಸಿದ್ದಾರೆ.

ದರೋಡೆ ಪಕ್ಕಾ ಪ್ಲ್ಯಾನ್​​ 

ಇನ್ನು ಈ ಆರೋಪಿಗಳಲ್ಲಿ ಅಂಕಿತ್ ಮಾದನಾಯಕನಹಳ್ಳಿ ವಾಸವಿದ್ದ. ಕಚೋರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ. ಎಷ್ಟು ದಿನ ಈ ರೀತಿ ಜೀವನ ಸಾಗಿಸುವುದು ಎಂದು ನಿರ್ಧರಿಸಿದ್ದ ಆತ ದರೋಡೆ ಪ್ಲ್ಯಾನ್​​ ಮಾಡಿದ್ದ. ಇತನಿಗೆ ರವಿ ಎಂಬಾತ ಸಾಥ್​ ನೀಡಿದ್ದ. ರವಿ ರಾಜಸ್ಥಾನದಲ್ಲಿದ್ದು, ಆತನ ಬಳಿ ಪಿಸ್ತೂಲ್ ಕೂಡ ಇತ್ತು. ಇದನ್ನೇ ಬಂಡವಾಳ‌ ಮಾಡಿಕೊಂಡಿದ್ದ ಆರೋಪಿಗಳು ದರೋಡೆ ಮಾಡಲು ಪ್ಲ್ಯಾನ್ ಮಾಡಿದ್ದರು.

ಪ್ಲ್ಯಾನ ಪ್ರಕಾರ ಜನವರಿ 27ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ರಾಮ್ ದೇವ್ ಜ್ಯುವೆಲರ್ಸ್​​​ಗೆ ನುಗಿದ್ದ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿ ಆಗಿದ್ದರು. ಖದೀಮರ ಕೈಚಳಕ ಸಿಸಿಟಿ ಟಿವಿಯಲ್ಲಿ ಸೆರೆ ಆಗಿತ್ತು. ಇನ್ನು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದರು.

ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ!

ಒಟ್ಟಿನಲ್ಲಿ ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಇದೀಗ ಎಲ್ಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನ ಕಸ್ಟಡಿಗೆ ಪಡೆದಿರುವ ಮಾದನಾಯಕಹಳ್ಳಿ ಪೊಲಿಸರು ವಿಚಾರಣೆ ನಡೆಸಿದ್ದಾರೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:46 pm, Mon, 9 February 26

Source link

Leave a Reply

Your email address will not be published. Required fields are marked *