ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ
ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ.
ಸಂಸ್ಥೆಯ ವಿವರಗಳು:
- ಸಂಸ್ಥೆ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (KMF SHIMUL )
- ಒಟ್ಟು ಹುದ್ದೆಗಳು: 194
- ಉದ್ಯೋಗ ಸ್ಥಳ: ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ
- ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕರು, ಜೂನಿಯರ್ ಟೆಕ್ನಿಷಿಯನ್
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಪದವಿ, B.Sc, B.Com, BBA, BBM, BE/B.Tech, BVSc & AH, M.Sc, MBA ಈಅರ್ಹತೆಗಳಲ್ಲಿ ಯಾವುದಾದರೂ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
- ಕನಿಷ್ಠ ವಯಸ್ಸು: 18 ವರ್ಷ
- ಗರಿಷ್ಠ ವಯಸ್ಸು: 35 ವರ್ಷ
ವಯಸ್ಸಿನ ಸಡಿಲಿಕೆ:
- 2A/2B/3A/3B ಅಭ್ಯರ್ಥಿಗಳು – 3 ವರ್ಷ
- SC/ST/ಪ್ರವರ್ಗ-I ಅಭ್ಯರ್ಥಿಗಳು – 5 ವರ್ಷ
ಅರ್ಜಿ ಶುಲ್ಕ:
- SC/ST/ಪ್ರವರ್ಗ-I/PWD – 500ರೂ.
- ಇತರರು – 1000 ರೂ.
ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:
- ಲಿಖಿತ ಪರೀಕ್ಷೆ
- ಅರ್ಹತಾ ಪಟ್ಟಿ (ಮೆರಿಟ್ ಲಿಸ್ಟ್)
- ಮೌಖಿಕ ಸಂದರ್ಶನ
ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ
ಅರ್ಜಿ ಸಲ್ಲಿಸುವ ವಿಧಾನ:
ಮೊದಲು KMF SHIMUL ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬೇಕು. ನಂತರ ಆನ್ಲೈನಲ್ಲಿ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಆನ್ಲೈನ್ ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳು ಮತ್ತು ಇತ್ತೀಚಿನ ಛಾಯಾಚಿತ್ರವನ್ನು ಅಪ್ಲೋಡ್ ಮಾಡಿ. ಬಳಿಕ ವರ್ಗಾನುಸಾರ ಅರ್ಜಿ ಶುಲ್ಕ ಪಾವತಿಸಿ ‘Apply’ ಬಟನ್ ಕ್ಲಿಕ್ ಮಾಡಿ. ಕೊನೆಗೆ ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆಯ ಪ್ರಿಂಟ್ ಕಾಪಿ ಡೌನ್ಲೋಡ್ ಮಾಡಿ ಇಟ್ಟುಕೊಳ್ಳಿ.
ಈ ನೇಮಕಾತಿ ಕರ್ನಾಟಕದ ಹಾಲು ಒಕ್ಕೂಟದಲ್ಲಿ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ