Headlines

ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ – Kannada News | India Not For Sale Minister Kiren Rijiju Warns Of Privilege Notice against Rahul Gandhi over Lok Sabha Speech

ನವದೆಹಲಿ, ಫೆಬ್ರವರಿ 11: ಲೋಕಸಭಾ ಅಧಿವೇಶನದಲ್ಲಿ ಇಂದು (ಬುಧವಾರ) ಭಾಷಣದ ವೇಳೆ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆಯಿತು.

ಅಮೆರಿಕದ ಒತ್ತಡಕ್ಕೆ ಮೋದಿ ಸರ್ಕಾರ ಶರಣಾಗಿದೆ. ಮೋದಿ ಸರ್ಕಾರ ಅಮೆರಿಕಕ್ಕೆ ಭಾರತ ಮಾತೆಯನ್ನು ಮಾರಾಟ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕೆ ಸರ್ಕಾರದ ಕಡೆಯಿಂದ ಮತ್ತು ಸ್ಪೀಕರ್ ಅವರಿಂದ ವಿರೋಧ ವ್ಯಕ್ತವಾಯಿತು. ಸದನದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಸದನದಲ್ಲಿ ಗದ್ದಲ ಭುಗಿಲೆದ್ದಿತು.

ಇದನ್ನೂ ಓದಿ: ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಈ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಕಿರಣ್ ರಿಜಿಜು, “ನೀವು ಯಾವುದೇ ಪುರಾವೆಗಳಿಲ್ಲದೆ ಆರೋಪಗಳನ್ನು ಹೊರಿಸುತ್ತಿದ್ದೀರಿ. ಅದು ಸ್ವೀಕಾರಾರ್ಹವಲ್ಲ. ನಿಮ್ಮ ಆರೋಪಗಳಿಗೆ ಸಾಕ್ಷಿ ನೀಡಿ. ಭಾರತ ಮಾರಾಟಕ್ಕಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ಇದೇ ವೇಳೆ ಸ್ಪೀಕರ್ ಕುರ್ಚಿಯಲ್ಲಿ ಕುಳಿತಿದ್ದ ಜಗದಾಂಬಿಕಾ ಪಾಲ್ ರಾಹುಲ್ ಗಾಂಧಿಯವರ ಆರೋಪಗಳನ್ನು ಲೋಕಸಭೆಯ ದಾಖಲೆಯಲ್ಲಿ ಸೇರಿಸಲಾಗುವುದಿಲ್ಲ ಎಂದು ತೀರ್ಪು ನೀಡಿದರು.

ಅಧಿವೇಶನದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ವಿರುದ್ಧ ಸರ್ಕಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಲಿದೆ. ಅವರು ಸದನವನ್ನು ದಾರಿ ತಪ್ಪಿಸಿದ್ದಾರೆ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *