ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ – Kannada News | Supreme Court Rejects Bail Plea of BJP MLA Byrathi Basavaraj in Biklu Shiva Murder Case, Told to Seek Regular Bail

ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು.

ಏತನ್ಮಧ್ಯೆ, ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *