Headlines

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ – Kannada News | Zameer Khan PS Lokayukta Case: High Court Stays Disproportionate Assets Probe

ಸರ್ದಾರ್ ಸರ್ಫರಾಜ್ ಖಾನ್​​ಗೆ ತಾತ್ಕಾಲಿಕ ರಿಲೀಫ್​Image Credit source: Tv9 Kannada

ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ ಬಿ.ಬಿ.ಪಾಟೀಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶೀಲನೆಯಲ್ಲಿ ಶೇ.131ರಷ್ಟು ಆದಾಯ ಮೀರಿದ ಆಸ್ತಿ ಗಳಿಕೆ ಕಂಡುಬಂದಿದೆ. ಸರ್ದಾರ್ ಸರ್ಫರಾಜ್ ಖಾನ್, 2 ಕೋಟಿ 80 ಲಕ್ಷ ಕೃಷಿ ಆದಾಯ ಘೋಷಿಸಿಕೊಂಡಿದ್ದಾರೆ. ಆದರೆ ಅದಕ್ಕೆ ಆಧಾರ ಒದಗಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಐಟಿ ಇಲಾಖೆಗೆ ಎಲ್ಲ ಆದಾಯ ಘೋಷಿಸಿದ್ದಾರೆಯೇ ಇಲ್ಲವೇ ಎಂದು ಫೆ.27ಕ್ಕೆ ಮಾಹಿತಿ ನೀಡಲು ಸೂಚಿಸಿ ತನಿಖೆಗೆ ತಡೆ ನೀಡಿ ಆದೇಶಿಸಿದೆ.

ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದರು. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ದಾಳಿ ವೇಳೆ ಪತ್ತೆಯಾಗಿದೆ. 4 ವಾಸದ ಮನೆ ಮತ್ತು 35 ಎಕರೆ ಕೃಷಿ ಜಮೀನು ದಾಖಲೆ, 66,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್​ಡಿ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿತ್ತು.

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?

ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಒಳಗೊಂಡು ಸರ್ಫರಾಜ್ ಖಾನ್​​ಗೆ​​ ಸೇರಿದ ಒಟ್ಟು 13 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.24 ಬೆಳ್ಳಂ ಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಎಲ್ಲಾ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ನಡೆಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *