2026 ರ ಟಿ20 ವಿಶ್ವಕಪ್ನ 19ನೇ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಜಿಂಬಾಬ್ವೆ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಗೆಲುವು ಖಚಿತ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಎಲ್ಲರ ನಿರೀಕ್ಷೆಯನ್ನು ಹುಸಿ ಮಾಡಿದ ಜಿಂಬಾಬ್ವೆ ಆಟಗಾರರು ಕೆಚ್ಚೆದೆಯ ಹೋರಾಟ ನೀಡಿ ಕಾಂಗರೂಗಳಿಗೆ ಮಣ್ಣು ಮುಕ್ಕಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಜಿಂಬಾಬ್ವೆ ಬೌಲರ್ಗಳ ಯೋಜಿತ ದಾಳಿಗೆ ತತ್ತರಿಸಿ 146 ರನ್ಗಳಿಸಲಷ್ಟೇ ಶಕ್ತವಾಗಿ 23 ರನ್ಗಳಿಂದ ಸೋಲೊಪ್ಪಿಕೊಂಡಿತು.