Headlines

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ – Kannada News | Shivaratri Special Buses: KSRTC Adds 2,155 Services from Bengaluru; Book Tickets

ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಹೆಚ್ಚುವರಿ ಬಸ್ಸುಗಳನ್ನು ಬಿಟ್ಟಿದೆ.

ಇಂದಿನಿಂದ 895 ಹೆಚ್ಚುವರಿ ಬಸ್‌ಗಳು ರಸ್ತೆಗೆ ಇಳಿಯಲಿದೆ. ನಾಳೆ 1,180 ಹೆಚ್ಚುವರಿ ಬಸ್‌ಗಳು, ಹಾಗೂ ಭಾನುವಾರ 80 ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುವುದು. ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಿಂದ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ತೆರಳುವ ಬಸ್‌ಗಳು ಇಲ್ಲಿಂದ ಲಭ್ಯವಿರಲಿದೆ. ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮತ್ತು ತಮಿಳುನಾಡು ಕಡೆಗೆ ಹೋಗುವವರಿಗೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ

ಇನ್ನು ನಿಲ್ದಾಣದಲ್ಲಿ ದಟ್ಟಣೆಯನ್ನು ತಪ್ಪಿಸಲು ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ನಿಗಮ ಕೋರಿದೆ. ಹಬ್ಬ ಮುಗಿಸಿ ವಾಪಸ್ ಬರುವವರಿಗೂ ಸಹ ಇದೇ ರೀತಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಮಹಾಶಿವರಾತ್ರಿ ಹಬ್ಬಕ್ಕೆ ವಿಶೇಷ ರೈಲು

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ (SWR) ಯಶವಂತಪುರ ಮತ್ತು ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ. ಇಂದಿನಿಂದ 06209 ಸಂಖ್ಯೆಯ ರೈಲು ಯಶವಂತಪುರದಿಂದ ರಾತ್ರಿ 22:40ಕ್ಕೆ ಹೊರಟು, ಮರುದಿನ ಬೆಳಗ್ಗೆ 09:15ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06210 ನಾಳೆ(ಶನಿವಾರ) ಕಲಬುರಗಿಯಿಂದ ಬೆಳಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 21:40ಕ್ಕೆ ಯಶವಂತಪುರ ತಲುಪಲಿದೆ. ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ಕೂಡ ವಿಶೇಷ ರೈಲುಗಳನ್ನು ಘೋಷಣೆ ಮಾಡಲಾಗಿದೆ. ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *