Headlines

ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? – Kannada News | Rajinikanth taking huge remuneration for movie with Kamal Haasan

ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಮತ್ತು ಕಮಲ್ ಹಾಸನ್ (Kamal Haasan) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ದಶಕಗಳಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ಬಳಿಕ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್ ಬಂಡವಾಳ ಹೂಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾ ಆಗಲಿದೆ ಎನ್ನಲಾಗುತ್ತಿದೆ. ಆದರೆ ರಜನೀಕಾಂತ್ ಮಾತ್ರ, ಗೆಳೆಯನಿಗೆ ಯಾವುದೇ ರಿಯಾಯಿತಿ ನೀಡದೆ ಭಾರಿ ದೊಡ್ಡ ಸಂಭಾವನೆಯನ್ನೆ ಸಿನಿಮಾಕ್ಕಾಗಿ ತೆಗೆದುಕೊಳ್ಳುತ್ತಿದ್ದಾರೆ.

ರಜನೀಕಾಂತ್ ನಾಯಕನಾಗಿ ನಟಿಸಲಿರುವ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದು, ಸ್ವತಃ ತಾವೂ ಸಹ ಪ್ರಮುಖವಾದ ಪಾತ್ರವೊಂದರಲ್ಲಿ ನಟಿಸಲಿದ್ದಾರೆ. ಈ ಮೆಗಾ ಪ್ರಾಜೆಕ್ಟ್‌ಗಾಗಿ ರಜಿನಿಕಾಂತ್ ಅವರಿಗೆ ಬರೊಬ್ಬರಿ 225 ಕೋಟಿ ರೂಪಾಯಿ ಸಂಭಾವನೆಯನ್ನು ನಿರ್ಮಾಪಕ ಕಮಲ್ ಹಾಸನ್ ನೀಡಲಿದ್ದಾರೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಬ್ಬ ನಟನಿಗೆ ನೀಡುತ್ತಿರುವ ಅತ್ಯಂತ ಗರಿಷ್ಠ ಸಂಭಾವನೆಗಳಲ್ಲಿ ಒಂದಾಗಲಿದೆ. ಕಮಲ್ ಹಾಸನ್ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಬಹುನಿರೀಕ್ಷಿತ ಚಿತ್ರಕ್ಕೆ ಯುವ ಪ್ರತಿಭೆ ಲೋಕೇಶ್ ಕನಗರಾಜ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು ಆದರೆ ಅದೀಗ ಸುಳ್ಳಾಗಿದೆ. ಸ್ವತಃ ಲೋಕೇಶ್ ಅವರೇ ತಾವು ಆ ಸಿನಿಮಾ ನಿರ್ದೇಶಿಸುತ್ತಿಲ್ಲ ಎಂದಿದ್ದಾರೆ. ‘ಮಹಾರಾಜ’ ಸಿನಿಮಾ ಮೂಲಕ ಭಾರಿ ದೊಡ್ಡ ಹಿಟ್ ನೀಡಿರುವ ನಿತಿಲನ್ ಸ್ವಾಮಿನಾಥನ್ ನಿರ್ದೇಶಿಸಲಿದ್ದಾರೆ ಎನ್ನಲಾಯ್ತು. ಬಳಿಕ ಅದೂ ಸಹ ಸುಳ್ಳಾಗಿದ್ದು ‘ಜೈಲರ್’, ‘ಜೈಲರ್ 2’ ನಿರ್ದೇಶಿಸಿರುವ ನೆಲ್ಸನ್ ದಿಲೀಪ್​​ಕುಮಾರ್ ಅವರು ಇದೀಗ ಈ ಸಿನಿಮಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

ಸುಮಾರು 35 ವರ್ಷಗಳ ಹಿಂದೆ ‘ಗಿರಫ್ತಾರ್’ ಸಿನಿಮಾದಲ್ಲಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಕೊನೆಯದಾಗಿ ಒಟ್ಟಿಗೆ ನಟಿಸಿದ್ದರು. ಇದೀಗ 35 ವರ್ಷಗಳ ಬಳಿಕ ಇಬ್ಬರೂ ಒಟ್ಟಿಗೆ ನಟಿಸಲಿರುವುದು ಸಿನಿಮಾ ಪ್ರೇಕ್ಷಕರಿಗೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾಕ್ಕಾಗಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಸಿನಿಮಾದ ಟೈಟಲ್ ಪ್ರೋಮೊ ಚಿತ್ರೀಕರಣ ನಾಳೆ (ಫೆಬ್ರವರಿ 14) ನಡೆಯಲಿದೆ ಎನ್ನಲಾಗುತ್ತಿದೆ.

ರಜಿನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರಿಗೂ ಸಮಾನ ಪ್ರಾಮುಖ್ಯತೆ ಇರುವ ಕಥೆಯನ್ನು ಸಿದ್ಧಪಡಿಸಲಾಗಿದೆಯಂತೆ. ಸದ್ಯ ರಜಿನಿಕಾಂತ್ ಅವರು ‘ಜೈಲರ್ 2’ ಸಿನಿಮಾನಲ್ಲಿ ಬ್ಯುಸಿಯಾಗಿದ್ದರೆ. ಕಮಲ್ ಹಾಸನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *