Headlines

ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ: 11 ಜನರಿಗೆ ಗಾಯ – Kannada News | Yadadri Bhuvanagiri Lab Blast: Choutuppal Fire Causes Massive Damage, 6 Hospitalized

ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ

ಹೈದರಾಬಾದ್ ಫೆ.14: ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಚೌಟುಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೋಟಿಗುಡೆಮ್‌ನಲ್ಲಿರುವ ಖಾಸಗಿ ಪ್ರಯೋಗಾಲಯವೊಂದರಲ್ಲಿ (Laboratory) ರೇಡಿಯೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಘಟಕಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಯೋಗಾಲಯದಲ್ಲಿ ಎಂದಿನಂತೆ ಕೆಲಸ ಸಾಗುತ್ತಿದ್ದಾಗ ಹಠಾತ್ತನೆ ರೇಡಿಯೇಟರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಪ್ರಯೋಗಾಲಯವನ್ನು ಆವರಿಸಿಕೊಂಡಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿತ್ತು.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಸುಮಾರು 10 ಅಗ್ನಿಶಾಮಕ ವಾಹನಗಳು ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ಅದೃಷ್ಟವಶಾತ್, ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್

ವಿಡಿಯೋ ಇಲ್ಲಿದೆ ನೋಡಿ:

ರೇಡಿಯೇಟರ್ ಸ್ಫೋಟಗೊಳ್ಳಲು ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಚೌಟುಪ್ಪಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಫೋಟದಿಂದಾಗಿ ಕಂಪನಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಹೇಳಲಾಗಿದೆ. ಸ್ಫೋಟದ ಸಮಯದಲ್ಲಿ ಪ್ರಯೋಗಾಲಯದ ಒಳಗೆ ಒಟ್ಟು 11 ಉದ್ಯೋಗಿಗಳು ಇದ್ದರು ಎಂದು ಅಧಿಕಾರಿಗಳು ದೃಢಪಡಿಸಿದರು. ನ್ಯೂಸ್ 18 ವರದಿಯ ಪ್ರಕಾರ , ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *