ಚಿಕ್ಕಬಳ್ಳಾಪುರ, ಫೆಬ್ರವರಿ 14: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬೆಸ್ಕಾಂ ಉಪ ವಿಭಾಗದಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಘವೇಂದ್ರ ಮತ್ತು ಸಿಬ್ಬಂದಿ ಬೇಜಾವಾಬ್ದಾರಿಯಿಂದ ವರ್ತಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಚೇರಿ ಬದಲು ಡಾಬದಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ, ಮದ್ಯದ ಬಾಟಲಿಗಳ ನಡುವೆ ಕುಳಿತುಕೊಂಡು ಕಡತ ವಿಲೇವಾರಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿದೆ.