ಹಾಸನ/ ತುಮಕೂರು, ಫೆಬವರಿ 15: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾಳನ್ನು ಪರಪುರುಷನ ಜೊತೆ ಪತ್ತೆ ಮಾಡಿರುವ ಪೊಲೀಸರು, ಪ್ರಿಯಾಂಕಾ ಮತ್ತು ಡೇವಿಡ್ ಇಬ್ಬರನ್ನೂ ವಶಕ್ಕೆ ಪಡೆದು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ತ್ತೊಂದೆಡೆ ಊರಿಗೆ ಏಕಪತ್ನಿ ವ್ರತಸ್ಥನಾಗಿ ಕಂಡವನ ಮನೆಯಲ್ಲಿಯೇ ಪ್ರಿಯಾಂಕಾ ಪತ್ತೆಯಾಗಿರೋದು ಸ್ಥಳೀಯರು ಹೌಹಾರುವಂತೆ ಮಾಡಿದೆ. ಸ್ವಾರಿ ಗರ್ಲ್ಸ್, ನನ್ನ ಹೆಂಡತಿ ಫುಲ್ ಸ್ಟ್ರಿಕ್ಟ್ ಎಂದು ಬೈಕ್ ಮೇಲೆ ಸ್ಟಿಕ್ಕರ್ ಹಾಕಿಸಿಕೊಂಡಿದ್ದ ಈತ, ಅದರ ಟ್ಯಾಂಕ್ ಮೇಲೆ ಡಾರ್ಲಿಂಗ್ ಅಂತಲೂ ಬರೆಸಿದ್ದ. ಖುದ್ದು ಮನೆ ಮಾಲೀಕ ಹೇಳುವಂತೆ ಬೆಕ್ಕಿನಂತೆ ಓಡಾಡುತಿದ್ದ ಈತನ ಮನೆಯಲ್ಲಿ ಮಹಿಳೆ ಪ್ರಿಯಾಂಕಾ ಸೇರಿದ್ದೇಗೆ ಎಂಬ ಗೊಂದಲ ಮುಂದುವರಿದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸತ್ಯ ಇನ್ನಷ್ಟೇ ಹೊರ ಬರಬೇಕಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.