Headlines

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | Kolar’s Tata Airbus Mini Helicopter Unit Launched by Modi and Macron Virtually

ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆImage Credit source: Google

ಕೋಲಾರ, ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್​​ ಸಿಂಗ್​, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 16 ಎಕರೆ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗಿದೆ. ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ಮೊದಲ ಹಂತದಲ್ಲಿ ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್​​ಗಳು ಇಲ್ಲಿ ತಯಾರಾಗಲಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಪ್ಲ್ಯಾನ್​​ ಸಿದ್ಧವಾಗಿರುವ ಮಾಹಿತಿ ಇದೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ.)

Source link

Leave a Reply

Your email address will not be published. Required fields are marked *