Headlines

ನಿಯಮ ಉಲ್ಲಂಘಿಸಿ ಸಚಿವ ಸ್ಥಾನಮಾನ: ಸಿದ್ದರಾಮಯ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ – Kannada News | Karnataka high Court asks His Stand about minister status to CM advisers And corporation heads

ಬೆಂಗಳೂರು, (ಫೆಬ್ರವರಿ 17): ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ (corporation heads) ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ (Karnataka high Court) ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ ಶೇ.15ರಷ್ಟನ್ನು ಮೀರುವಂತಿಲ್ಲ. ಆದರೆ ಸಚಿವ ಸ್ಥಾನಮಾನದ ಮೂಲಕ ಸಂವಿಧಾನದ ನಿಯಮ ಉಲ್ಲಂಘಿಸಿದ್ದಾರೆಂದು ದೂರುದಾರ ಸೂರಿ ಪಾಯಲ ಪರ ವಕೀಲರು ವಾದ ಮಂಡಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ನಿಲುವು ತಿಳಿಸಲು ಸೂಚಿಸಿ ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಭಾರೀ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ ವಿರೋಧದ ಚರ್ಚೆಗಳು ಸಹ ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸೂರಿ ಪಾಯಲ ಎಂಬುವರು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಿದ್ದು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ 164(1)A ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಇನ್ನು ಈ ಹಿಂದೆ ಸಹ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್‌, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನೇಮಕಾತಿ ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಎಂಬುವರಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:39 pm, Tue, 17 February 26

Source link

Leave a Reply

Your email address will not be published. Required fields are marked *