Headlines

ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Karnataka Gold Crime: Hubballi Woman and KGF Soil Thieves Arrested*

ರಾಣೇಬೆನ್ನೂರು, ಫೆ.19: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ. ಈಕೆ ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಸುಮಾರು 236 ಗ್ರಾಂ ಚಿನ್ನಾಭರಣಗಳನ್ನು (ಅಂದಾಜು 16 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ರಾಣೇಬೆನ್ನೂರಿನ ಖಾಸಗಿ ಗೋಲ್ಡ್ ಕಂಪನಿಗೆ ಬಂದಿದ್ದಳು.

ಚಿನ್ನ ಮಾರಾಟ ಮಾಡಲು ಬಂದ ಮಹಿಳೆಯ ನಡವಳಿಕೆ ಮತ್ತು ಆಕೆಯ ಬಳಿಯಿದ್ದ ಚಿನ್ನದ ದಾಖಲೆಗಳ ಬಗ್ಗೆ ಗೋಲ್ಡ್ ಕಂಪನಿಯ ಸಿಬ್ಬಂದಿಗೆ ತೀವ್ರ ಅನುಮಾನ ಮೂಡಿದೆ. ತಕ್ಷಣವೇ ಈ ಬಗ್ಗೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ರಾಣೇಬೆನ್ನೂರು ನಗರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಬಳಿ ಒಟ್ಟು 236 ಗ್ರಾಂ ಚಿನ್ನ ಇರುವುದು ತಿಳಿದುಬಂದಿದೆ. ಅದರಲ್ಲಿ ಆಕೆ 40 ಗ್ರಾಂ ಚಿನ್ನವನ್ನು (ಸುಮಾರು 6 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ಮುಂದಾಗಿದ್ದಳು ಎನ್ನಲಾಗಿದೆ. ಸದ್ಯ ಪೊಲೀಸರು ಚಿನ್ನವನ್ನು ವಶಪಡಿಸಿಕೊಂಡಿದ್ದು, ಈಕೆಯ ಹಿಂದೆ ಬೇರೆ ಜಿಲ್ಲೆಯ ಕಳ್ಳರ ಗ್ಯಾಂಗ್ ಇದೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಕೋಲಾರದಲ್ಲಿ ಪ್ರತ್ಯೇಕ ಘಟನೆ:

ಕೆಜಿಎಫ್‌ನ ಐತಿಹಾಸಿಕ ಚಿನ್ನದ ಗಣಿ ಪ್ರದೇಶದಲ್ಲಿ ಅಕ್ರಮವಾಗಿ ಚಿನ್ನ ಮಿಶ್ರಿತ ಮಣ್ಣನ್ನು ಕದಿಯುತ್ತಿದ್ದ ಎಂಟು ಜನರ ತಂಡವನ್ನು ಉರಿಗಾಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಜಿಎಫ್‌ನ ಗಿಫ್ಫಾರ್ಟ್ ಶಾಪ್ಟ್ ಪ್ರದೇಶದಲ್ಲಿ ಈ ಗ್ಯಾಂಗ್ ಅಕ್ರಮವಾಗಿ ಪ್ರವೇಶಿಸಿತ್ತು. ಗಣಿಯ ಆಳದಿಂದ ಚಿನ್ನದ ಅಂಶವಿರುವ ಮಣ್ಣನ್ನು ಹೊರತೆಗೆದು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಒಟ್ಟು 8 ಚೀಲಗಳಲ್ಲಿ ತುಂಬಿದ್ದ ಚಿನ್ನ ಮಿಶ್ರಿತ ಮಣ್ಣನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಈ ಮಣ್ಣಿನ ಮೌಲ್ಯ ಸುಮಾರು 40,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಬಂಧಿತ ಎಂಟು ಆರೋಪಿಗಳ ವಿರುದ್ಧ ಉರಿಗಾಂ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಕೆಜಿಎಫ್ ಗಣಿ ಮುಚ್ಚಲ್ಪಟ್ಟಿದ್ದರೂ, ಇಂದಿಗೂ ಅದರ ಮಣ್ಣಿನಲ್ಲಿ ಚಿನ್ನದ ಅಂಶವಿರುವ ಕಾರಣ ಇಂತಹ ಕಳ್ಳತನ ಪ್ರಕರಣಗಳು ನಡೆಯುತ್ತಿದೆ. ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:21 am, Thu, 19 February 26

Source link

Leave a Reply

Your email address will not be published. Required fields are marked *