Headlines

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ – Kannada News | India A enters final of ACC Women’s Asia Cup Rising Stars

ಬ್ಯಾಂಕಾಕ್​ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್​ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಭಾರತ ಎ ತಂಡವು ಫೈನಲ್​ಗೇರಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ್ ಎ ತಂಡವನ್ನು ಎದುರಿಸಲಿದೆ.

 

Source link

Leave a Reply

Your email address will not be published. Required fields are marked *